ಸದನ ಪಾವಿತ್ರ್ಯ ಕಾಪಾಡುವುದು ಎಲ್ಲರ ಕರ್ತವ್ಯ
ಸಾಗರ: ಶಾಸನಸಭೆಗೆ ಆಯ್ಕೆಯಾಗಿ ಬರುವವರು ಸದನದ ಪಾವಿತ್ರ್ಯತೆ ಕಾಪಾಡಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ನ್ಯಾಯಾಲಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ವಕೀಲರ ಸಂಘ ನೀಡಿದ ಸನ್ಮಾನ ಸ್ವೀಕರಿಸಿ, ವೈಯಕ್ತಿಕ ಪ್ರತಿಷ್ಠೆಗಾಗಿ ಸದನವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ವಿಧಾನಸಭೆ ಎನ್ನುವುದು ಜನರ ಕೈಗನ್ನಡಿ. ಇಲ್ಲಿ ಜನರ ಸಮಸ್ಯೆ ಬಗ್ಗೆ, ಆಶೋತ್ತರಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಯಬೇಕು. ಈ ನಿಟ್ಟಿನಲ್ಲಿ ಆಡಳಿತ ಹಾಗೂ ವಿಪಕ್ಷ ಇಬ್ಬರ ಜವಾಬ್ದಾರಿಯೂ ಇದೆ. ಜನಪ್ರತಿನಿಧಿಯಾದವನು ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಆತನ ಆಯ್ಕೆಗೊಂದು ಅರ್ಥ ಸಿಗುತ್ತದೆ ಎಂದರು.
ಪ್ರಾಮಾಣಿಕತೆ: ಸ್ಪೀಕರ್ ಆದವರು ರಾಜಕೀಯ ಚಟುವಟಿಕೆಗಳಿಂದ ದೂರ ಇರಬೇಕು. ನನ್ನ ಅವಧಿಯಲ್ಲಿ ಅದನ್ನು ಪ್ರಾಮಾಣಿಕವಾಗಿ ರೂಢಿಸಿಕೊಂಡು ಬರುತ್ತೇನೆ. ಆಡಳಿತ ಯಂತ್ರ ಕುಸಿದಿದ್ದರಿಂದ ಜನರು ಸಣ್ಣಪುಟ್ಟ ಸಮಸ್ಯೆಗಳಿಗೂ ಮಂತ್ರಿಗಳನ್ನು, ಶಾಸಕರನ್ನು ಎಡತಾಕುವಂತೆ ಆಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ನಿಗಾ ವಹಿಸಬೇಕು ಎಂದು ಹೇಳಿದರು. ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಧೀಶರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

