ಶಿವಮೊಗ್ಗ

ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿ: ಅಪ್ಪಾಜಿ

Published On :

ಭದ್ರಾವತಿ: ವಿದ್ಯಾರ್ಥಿಗಳನ್ನು ಶಿಸ್ತಿನ ಸಿಪಾಯಿಗಳನ್ನಾಗಿ ಮಾಡುವ ಶಕ್ತಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮಾತ್ರವಿದೆಯಾದ್ದರಿಂದ ಅವರು ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿ, ಭದ್ರಾವತಿ ತಾಲೂಕಿಗೆ ಕೀರ್ತಿತರುವ ದೈಹಿಕ ಶಿಕ್ಷಕರಾಗಬೇಕು ಶಾಸಕ ಎಂ.ಜೆ.ಅಪ್ಪಾಜಿ ಸಲಹೆ ನೀಡಿದರು.
ಅವರು 2013-14ನೇ ಸಾಲಿನ ಪ್ರಥಮ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬೆಳವಣಿಗೆಗೆ ಪೂರಕ: ದೈಹಿಕ ಶಿಕ್ಷಕರು ಮಕ್ಕಳಲ್ಲಿ ಶಿಸ್ತು, ಸಮಯಪಾಲನೆ ಮುಂತಾದ ಕೌಶಲ್ಯ ಬೆಳೆಸುವುದರೊಂದಿಗೆ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುತ್ತಾರೆ. ವಿದ್ಯಾಸಂಸ್ಥೆಗಳು ಮತ್ತು ಸಮಾಜದ ಅಭಿವೃದ್ಧಿಗೂ ದೈಹಿಕ ಶಿಕ್ಷಕರು ಕಾರಣರಾಗಿರುತ್ತಾರೆ ಎಂದು ಶಾಸಕ ಎಂ.ಜೆ.ಅಪ್ಪಾಜಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎಸ್.ಎಲ್. ಚವಾಣ್ ಮಾತನಾಡಿದರು.  ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ. ಸೋಮಶೇಖರಯ್ಯ ಶಾಲೆಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಾರ್ಥನೆ ಮಾಡಿಸುವುದರಿಂದ ಆರಂಭವಾಗುವ ದೈಹಿಕ ಶಿಕ್ಷಣ ಶಿಕ್ಷಕರ ಸೇವೆ ವಿದ್ಯಾರ್ಥಿಗಳಲ್ಲಿ ಶಿಸ್ತು  ಮೂಡಿಸುವವರೆಗೆ ಅವರ ಮೇಲೆ ಪ್ರತಿಯೊಂದು ಜವಾಬ್ದಾರಿಯೂ ಇರುತ್ತದೆ ಎಂದರು. ಸರ್ವ ಶಿಕ್ಷಣ ಅಭಿಯಾನ ಸಮನ್ವಯಾಧಿಕಾರಿ ದಾರುಕೇಶ್, ಹಿ.ಪ್ರಾ.ದೈ.ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಶಿವಲಿಂಗೇಗೌಡ, ಧರ್ಮಪ್ಪ ಮೊದಲಾದವರು ಉಪಸ್ಥಿತರಿದ್ದರು. ಭದ್ರಾವತಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಮದ್ ನೂರುಲ್ಲಾ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.