ಶಿವಮೊಗ್ಗ

ಸುದ್ದಿ ಸಂಕ್ಷೇಪ

Published On :

ಸಾಲ ಬಾಧೆ: ರೈತ ಆತ್ಮಹತ್ಯೆ
ಸಾಗರ: ತಾಲೂಕಿನ ಆನಂದಪುರಂ ಹೋಬಳಿ ಕೈರಾ ಗ್ರಾಮದ ಮಹೇಶ್ ಬಿನ್ ಮಂಜಪ್ಪ(41) ಎಂಬ ರೈತ ಸಾಲ ಬಾಧೆಯಿಂದ ಹತಾಶನಾಗಿ ಶನಿವಾರ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಶನಿವಾರ ಬೆಳಿಗ್ಗೆ ಮನೆಯಲ್ಲಿ ತಿಂಡಿ ತಿಂದು ಕಳೆನಾಶಕ ಸಿಂಪಡಿಸುವ ಉದ್ದೇಶದಿಂದ ಹೊಲಕ್ಕೆ ಹೋದವರು ಅಲ್ಲಿಯೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಅವರನ್ನು ಆನಂದಪುರಂ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಸಾಗಿಸಲಾಯಿತಾದರೂ ಪ್ರಾಣ ಉಳಿಯಲಿಲ್ಲ. ಮಹೇಶ್ ಅವರು ಜಮೀನಿನ ಆಧಾರದ ಮೇಲೆ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿ  ಸುಮಾರು ಒಂದು ಲಕ್ಷ ರು. ಸಾಲ ಮಾಡಿಕೊಂಡಿದ್ದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
150 ಕೆಜಿ ಗಾಂಜಾ ವಶ
ಹನೂರು: ಕೊಳ್ಳೇಗಾಲ ತಾಲೂಕಿನ ಕುರಹಟ್ಟಿ ಹೊಸೂರು ಗ್ರಾಮದಲ್ಲಿ ಬೆಳೆಗಳ ಮಧ್ಯ ಬೆಳೆದಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ರಾಮಾಪುರ ಠಾಣಾ ಪೊಲೀಸರು ದಾಳಿ ನಡೆಸಿ ಕುರಹಟ್ಟಿ ಹೊಸೂರು ಗ್ರಾಮದ ಪುಟ್ಟರಾಜು ಎಂಬವರ ಜಮೀನಿನಲ್ಲಿ ಬದನೆ ಮತ್ತು ನೀರಿನ ಕಟ್ಟೆ ಸುತ್ತಮುತ್ತಲ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 150 ಕೆಜಿ ತೂಕದ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.