ಶಿವಮೊಗ್ಗ

ಕ್ಯಾರಿಓವರ್ ಪದ್ಧತಿ ಸಮಸ್ಯೆ ಪರಿಹರಿಸಲು ಕೆಜೆಪಿ ವಿದ್ಯಾರ್ಥಿ ಘಟಕ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.15
ಡಿಪ್ಲೊಮೊ ಕೋರ್ಸ್‌ಗಳ ಕ್ಯಾರಿಓವರ್ ಪದ್ಧತಿಯಲ್ಲಿನ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿ ಕೆಜೆಪಿ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡಿದ್ದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದರು.
ಈ ಹಿಂದೆ ಕ್ಯಾರಿ ಓವರ್ ಪದ್ಧತಿ ಖಂಡಿಸಿ ಸರ್ಕಾರ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತಾದರೂ ಸರ್ಕಾರ ಸಮಸ್ಯೆಗೆ ಸ್ಪಂದಿಸದ ಕಾರಣ ಹೈಕೋರ್ಟ್ ಮೊರೆ ಹೋಗಲಾಗಿತ್ತು. 2012-13ನೇ ಸಾಲಿಗೆ ಒಳಪಡುವಂತೆ 10 ವಿಷಯಗಳಲ್ಲಿ ಕ್ಯಾರಿ ಓವರ್ ಪದ್ಧತಿ ನೀಡಿರುವ ಉಚ್ಛ ನ್ಯಾಯಾಲಾಯದ ತೀರ್ಪು ನೀಡಿತ್ತು.
ಡಿಪ್ಲೊಮೊಯಿಂದ ವಂಚಿತ: ಸರ್ಕಾರ ಈಗಲಾದರೂ ಎಚ್ಚೆತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸಬೇಕು. ಇಲ್ಲವಾದರೆ 2013-14ನೇ ಸಾಲಿನ ಡಿಪ್ಲೊಮೊ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗಲಿದೆ ಮತ್ತು ಜಿಲ್ಲೆಯಲ್ಲಿ ಶೇ.60ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೊಮೊ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಕೆಜೆಪಿ ಮುಖಂಡರು ಆತಂಕ ವ್ಯಕ್ತಪಡಿಸಿದರು.
4 ವಿಷಯದ ಕ್ಯಾರಿ ಓವರ್ ಪದ್ಧತಿಯೂ ಗ್ರಾಮೀಣ ಭಾಗದ ಬಡ ಡಿಪ್ಲೊಮೊ ವಿದ್ಯಾರ್ಥಿಗಳ ಪಾಲಿಗೆ ಹೊರೆಯಾಗಿ ಪರಿಣಿಸಿದೆ. ಈ ಕೂಡಲೇ ರಾಜ್ಯ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಘಟಕದ ಕೆಜೆಪಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ರುದ್ರೇಶ್, ನಗರಸಭಾ ಸದಸ್ಯ ಐಡಿಯಲ್ ಗೋಪಿ, ಮುಖಂಡರಾದ ಸೈಯದ್ ನೂಮಾನ್, ಸೂರಜ್, ಶಶಿಕುಮಾರ್, ತಿಲಕ್, ಚೇತನ್, ಸುಶಾಂತ್, ಸುಮಂತ್ ಮೊದಲಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.