ಅರ್ಜಿ ಆಹ್ವಾನ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಸರ್ಕಾರದಿಂದ ಮತ್ತು ಮಾನ್ಯತೆ ಪಡೆದ ವಾಣಿಜ್ಯ ವಿದ್ಯಾಸಂಸ್ಥೆಗಳಲ್ಲಿ ಬೆರಳಚ್ಚು ಮತ್ತು ಶೀಘ್ರಲಿಪಿ ತರಬೇತಿ ಪಡೆಯುತ್ತಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಪ್ರವರ್ಗ-1, 2ಎ, 2ಬಿ, 3ಎ, ಮತ್ತು 3ಬಿ ಗುಂಪಿಗೆ ಸೇರಿದ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು 2013ನೇ ಸಾಲಿನ ಆಗಸ್ಟ್ ಮಾಹೆಯಿಂದ 2014ರ ಮೇ ಅವಧಿಯವರೆಗೆ ತರಬೇತಿ ಪಡೆಯುತ್ತಿರುವವರಾಗಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳನ್ನು ಹೊರತುಪಡಿಸಿ, ಉಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ವಾರ್ಷಿಕ ವರಮಾನವು 15 ಸಾವಿರ ರುಪಾಯಿ ಮಿತಿಯೊಳಗಿರಬೇಕು. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಅಂಕಪಟ್ಟಿ, ಶಾಲಾ ವರ್ಗಾವಣಾ ಪತ್ರ ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ವಾಣಿಜ್ಯ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಸದರಿ ಪ್ರಾಂಶುಪಾಲರು ನಿಗದಿತ ಅರ್ಜಿ ನಮೂನೆಗಳನ್ನು ಪರಿಶೀಲಿಸಿ ಅಕ್ಟೋಬರ್ 2ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಸವಚೇತನ ಬಿಲ್ಡಿಂಗ್, 100ಅಡಿ ರಸ್ತೆ, ರವೀಂದ್ರ ನಗರ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222129 ಇವರನ್ನು ಸಂಪರ್ಕಿಸಬಹುದಾಗಿದೆ.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ
ಭದ್ರಾವತಿ: ಪಟ್ಟಣದ ನ್ಯೂಟೌನ್ನ ಜಯಶ್ರೀ ವೃತ್ತದಲ್ಲಿರುವ ಚಮನ್ ಷಾವಲಿ ವಿದ್ಯಾಸಂಸ್ಥೆಯಲ್ಲಿ ಉರ್ದು ಅನುದಾನಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 100 ಉಚಿತ ಪಠ್ಯಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮೆಹಬೂಬ್ ಸಾಬ್ ಉಪಾಧ್ಯಕ್ಷರಾದ ಸಿ.ಕೆ. ಅಸ್ಮತ್ ಪಾಷ ಮೊದಲಾದವರು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮತ್ತು ನೈತಿಕ ಉನ್ನತಿಗೆ ಶಿಕ್ಷಕರು ಶ್ರಮಿಸಬೇಕೆಂದು ಕರೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

