ಶಿವಮೊಗ್ಗ

ಜಾನುವಾರು ಅಡ್ಡಾದಿಡ್ಡಿ ಓಡಾಟ: ಎಚ್ಚರಿಕೆ

Published On :

ಭದ್ರಾವತಿ: ರಸ್ತೆಯಲ್ಲಿ ಜಾನುವಾರು ಅಡ್ಡಾದಿಡ್ಡಿ ಓಡಾಡುವುದು, ಮಲಗುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದ್ದು, ಪಟ್ಟಣದಲ್ಲಿ ಜಾನುವಾರು ಸಾಕಿರುವವರು ಅವುಗಳನ್ನು ರಸ್ತೆಗೆ ಬಿಡದಂತೆ ನೋಡಿಕೊಳ್ಳಬೇಕು ಎಂದು ಪೌರಾಯುಕ್ತ ಬಿ.ಡಿ. ಬಸವರಾಜಪ್ಪ ತಿಳಿಸಿದ್ದಾರೆ. ದೇವಸ್ಥಾನದ ಮಂಡಳಿಯವರೂ ದೇವರಿಗೆ ಬಿಟ್ಟಿರುವ ಗೂಳಿಗಳನ್ನು ದೇವಸ್ಥಾನ ಆವರಣದಲ್ಲಿ ಕಟ್ಟಿಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಪುರಸಭಾ ಕಾಯ್ದೆ 1964ರನ್ವಯ ದಂಡ ವಿಧಿಸಿ ಬಿಡಾಡಿ ದನಗಳನ್ನು ನಿಯಂತ್ರಿಸಲು ನಿಯಮಾನುಸಾರ ಕ್ರಮ ವಹಿಸಿ ಗೋಶಾಲೆಗೆ ಕಳಿಸಲಾಗುವುದು ಎಂದೂ ತಿಳಿಸಲಾಗಿದೆ.
 ಕಿರುಕುಳ ಆರೋಪ
ಶಿವಮೊಗ್ಗ:  ನಗರದಲ್ಲಿ ಸ್ಥಾಪನೆಗೊಂಡಿರುವ ಬಹುರಾಷ್ಟ್ರೀಯ ಕಂಪನಿಯೊಂದು (ಬಿಪಿಒ) ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಂಪನಿಯ ಕೆಲವು ಉದ್ಯೋಗಿಗಳು ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
 ಇಂಗ್ಲೆಂಡ್ ಮೂಲದ ಕಂಪನಿಯೊಂದು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 350 ಕ್ಕೂ ಅಧಿಕ ಯುವಕ- ಯವತಿಯರು ಪಾಳಿಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ಕೆಲ ಅಧಿಕಾರಿಗಳು ಕೆಳ ಹಂತದ ನೌಕರರಿಗೆ ಕಿರುಕುಳ ನೀಡುತ್ತಿದ್ದು, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಉದ್ಯೋಗಿಗಳು ಆರೋಪಿಸಿದರು.
2 ವರ್ಷಗಳಿಂದ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ನ್ಯಾಯಬದ್ಧ ಸಂಬಳ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಕೆಲಸದಿಂದ ತೆಗೆದು ಹಾಕುತ್ತಾರೆ. ಆದರಿಂದ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.