ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜುಲೈ ಮಾಹೆಯ ನಿಗದಿತ ದಿನಾಂಕಗಳಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜು.23ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಹೊಸನಗರ, ಮಧ್ಯಾಹ್ನ 3ರಿಂದ 5.30ರ ವರೆಗೆ ಸಾಗರ, ಜುಲೈ 24ರಂದು ಬೆಳಿಗ್ಗೆ 10.30ರಿಂದ 1.30ರವರೆಗೆ ಸೊರಬ, ಮಧ್ಯಾಹ್ನ 3.00ರಿಂದ 5.30ರವರೆಗೆ ಶಿಕಾರಿಪುರ, ಜುಲೈ 25ರಂದು ಬೆಳಿಗ್ಗೆ 10.30ರಿಂದ 1.30ರವರೆಗೆ ತೀರ್ಥಹಳ್ಳಿ ಹಾಗೂ ಜುಲೈ 26ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ಭದ್ರಾವತಿ ಪ್ರವಾಸಿ ಮಂದಿರದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

