ವಿಶ್ವ ಜನಸಂಖ್ಯಾ ದಿನಾಚರಣೆ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜುಲೈ 20ರಂದು ಬೆಳಿಗ್ಗೆ 11ಗಂಟೆಗೆ ಶಿವಮೊಗ್ಗ ತಾಲೂಕು ಹೊಳಲೂರಿನ ಮೈಲಾರೇಶ್ವರ ದತ್ತ ಸಮುದಾಯ ಭವನದಲ್ಲಿ ತಾಲೂಕು ಮಟ್ಟದ ವಿಶ್ವಜನಸಂಖ್ಯಾ ದಿನಾಚರಣೆ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಉದ್ಘಾಟಿಸುವರು. ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯಿತ್ರಿ ಷಣ್ಮುಖಪ್ಪ, ಜಿ.ಪಂ.ಸದಸ್ಯ ಅಶೋಕನಾಯ್ಕ, ಕೃಷ್ಣೇಗೌಡ, ರೇಣುಕಮ್ಮ, ಪ್ರೇಮಾ ಸುಧಾಕರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ದೇವಿಬಾಯಿ ಧರ್ಮಾನಾಯ್ಕ, ತಾಲೂಕು ಪಂಚಾಯಿತಿ ಸದಸ್ಯ ದೇವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಣ್ಣರೆಡ್ಡಿ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಪ್ಪ ಬಿ. ಅಧ್ಯಕ್ಷತೆ ವಹಿಸುವರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ಹೊಳಲೂರು ಗ್ರಾಮ ಪಂಚಾಯಿತಿಯ ಸದಸ್ಯರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ತಾಲೂಕು ಕಾರ್ಯನಿರ್ವಹಣಾಧಿಕಾರಿ ಎ.ಟಿ. ಜಯಕುಮಾರ್, ತಹಶೀಲ್ದಾರ್ ಎಚ್. ಕೊಟ್ರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಸಿ. ದಿನೇಶ್ ಹಾಗೂ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್ ಎಂ.ವಿ. ಅವರು ಉಪಸ್ಥಿತರಿರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

