ಶಿವಮೊಗ್ಗ

ಸ್ಪೋರ್ಟ್ಸ್ ಕಾಂಪ್ಲೆಕ್: ತಡೆ ಕೋರಿದ್ದ ಅರ್ಜಿ ವಜಾ

Published On :

ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ ನಿರ್ಮಾಣಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಂಡಿದೆ.
ಗೋಪಾಲಗೌಡ ಬಡಾವಣೆ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಸರ್ಕಾರವು 4 ವರ್ಷಗಳ ಹಿಂದೆ ನಿರ್ಮಿಸಲು ಉದ್ದೇಶಿಸಿದ್ದ ಸುಮಾರು 11 ಕೋಟಿ ವೆಚ್ಚದ ಕ್ರೀಡಾ ಸಮುಚ್ಚಯ ಕಾಮಗಾರಿಗೆ ನೆನೆಗುದಿಗೆ ಬಿದ್ದಿತ್ತು. ಉದ್ದೇಶಿತ ಕ್ರೀಡಾ ಸಮುಚ್ಚಯದ ಜಾಗಕ್ಕೆ ಹೊಂದಿಕೊಂಡಂತೆ ಶಾಲೆಯೊಂದಿದ್ದು, ಇಲ್ಲಿ ಸಾವಿರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ನಿರತರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಆಟೋಟಕ್ಕೆ ಈ ಕ್ರೀಡಾಂಗಣ ಬಳಕೆಯಾಗುತ್ತಿದ್ದುದರಿಂದ ಪರಮೇಶ್ವರ್ ಹಾಗೂ ಶಂಕರ್ ಎಂಬವರು ಹೈಕೋರ್ಟ್‌ನಲ್ಲಿ ಉದ್ದೇಶಿತ ಕ್ರೀಡಾ ಸಮುಚ್ಚಯದ ಕಾಮಗಾರಿಗೆ ತಡೆಯಾಜ್ಞೆ ತರಲು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ರಾಜ್ಯ ಉಚ್ಚನ್ಯಾಯಾಲಯವು ಇವರು ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿಯಿಲ್ಲ, ಬದಲಾಗಿ ಖಾಸಗಿ ಹಿತಾಸಕ್ತಿ ಇದೆ ಎಂದು ಹೇಳಿದೆ. ಅಲ್ಲದೇ ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡಿದ ಕಾರಣಕ್ಕೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದವರಿಗೆ 40 ಸಾವಿರ ದಂಡ ವಿಧಿಸಿ, ಇದರಲ್ಲಿ ತಲಾ 20 ಸಾವಿರ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ ಮತ್ತ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗೆ ನೀಡುವಂತೆ ಆದೇಶಿಸಿದೆ.
ಹೈಕೋರ್ಟ್‌ನ ಈ ತೀರ್ಪು ಕ್ರೀಡಾ ಸಮುಚ್ಚಯದ ನಿರ್ಮಾಣಕ್ಕೆ ಹೋರಾಟ ನಡೆಸಿದ ಅನೇಕ ಸಂಘ ಸಂಸ್ಥೆಗಳ ಹಾಗೂ ನಾಗರೀಕರಿಗೆ ಸಂದ ಜಯವಾಗಿದೆ ಎಂದು ಸ್ಥಳೀಯ ನಿವಾಸಿ ಕೆ.ಜಿ. ಚನ್ನಕೇಶವ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.