ಶಿವಮೊಗ್ಗ

ಉಚಿತ ತಟ್ಟೆ, ಶಬ್ದಕೋಶ ವಿತರಣೆ

Published On :

ಶಿವಮೊಗ್ಗ: ರೋಟರಿ ಶಿವಮೊಗ್ಗ ಪೂರ್ವ ಹಾಗೂ ಇನ್ನರ್‌ವೀಲ್ ಕ್ಲಬ್‌ನಿಂದ ಕಸ್ತೂರ ಬಾ ಬಾಲಿಕ ಪ್ರೌಢಶಾಲೆ ಮಕ್ಕಳಿಗೆ ಉಚಿತವಾಗಿ ಊಟದ ತಟ್ಟೆ, ಪ್ರತಿಭಾವಂತ 10 ವಿದ್ಯಾರ್ಥಿಗಳಿಗೆ ಶಬ್ದಕೋಶ ವಿತರಿಸಲಾಯಿತು.
 ಎಸ್‌ಎಸ್‌ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಶ್ವೇತಾ ಹಾಗೂ ಮುಬೀನಾ ಇವರಿಗೆ ರೋಟರಿ ಅಧ್ಯಕ್ಷ ಕೆ.ಎಸ್. ಪುರುಷೋತ್ತಮ್ ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಭೆ ಯಾರ ಸ್ವತ್ತು ಅಲ್ಲ. ಅದು ನಮ್ಮ ಸ್ವಂತ ಸಾಧನೆಯಿಂದ ಬರುವಂತಹದ್ದು. ಈ ನಿಟ್ಟಿನಲ್ಲಿ ನಾವು ಕಷ್ಟ ಹಾಗೂ ಇಷ್ಟಪಟ್ಟು ಓದಿ ಉತ್ತಮ ಸಾಧನೆ ಮಾಡಿದರೆ ಪ್ರತಿಭೆ ತಾನಾಗಿ ಹುಡುಕಿ ಬರುತ್ತದೆ ಎಂದರು.
 ರೋಟರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್ ಮಾತನಾಡಿ, ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯ, ವ್ಯಕ್ತಿತ್ವ ವಿಕಸನ, ಹದಿಹರೆಯದ ಸಮಸ್ಯೆಗಳು ಹಾಗೂ ಸಾಂಸ್ಕೃತಿಕ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷ ಸುಜಯ ಪುರುಷೋತ್ತಮ್ ಮಾತನಾಡಿ, ಇಂದಿನ ಕಾಲದಲ್ಲಿ ಪುರುಷರಿಗಿಂತ ಮಹಿಳೆಯರೇ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಆದ್ದರಿಂದ ಇರುವಂತಹ ವಿಪುಲ ಅವಕಾಶವನ್ನು ಬಳಸಿಕೊಳ್ಳಬೇಕೆಂದರು.  ವಿದ್ಯಾರ್ಥಿ ಸಂಘ ಹಾಗೂ ಇಂಟರ ಯಾಕ್ಟ್ ಕ್ಲಬ್ ನೂತನ ಪ್ರಧಾನಿ ಬಸವಶ್ರೀ ಹಾಗೂ ಉಪಪ್ರಧಾನಿ ಲಾವಣ್ಯ ತಮ್ಮ ತಂಡದೊಂದಿಗೆ ಅಧಿಕಾರ ಸ್ವೀಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.