ಶಿವಮೊಗ್ಗ

ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಿ: ಶಂಕರಮೂರ್ತಿ

Published On :

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಕೆಲಸ ಪೋಷಕರು ಮತ್ತು ಶಿಕ್ಷಕರಿಂದ ಆಗಬೇಕು ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಇನ್ಸ್‌ಪೈರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಆಧಾರಿತ ಯೋಜನೆಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಕಾಳಜಿ ವಹಿಸಲಿ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಜಾಗೃತಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೊಸ-ಹೊಸ ಸಂಶೋಧನೆಗಳನ್ನು ಅನ್ವೇಷಿಸುವ ಮನೋಭಾವವನ್ನು ತುಂಬುವ ಕಾರ್ಯ ಶಿಕ್ಷಕರಿಂದ ಆಗಬೇಕಿದ್ದು, ಅದಕ್ಕೆ ಪೋಷಕರ ಪ್ರೋತ್ಸಾಹ ಕೂಡಾ ಅಷ್ಟೇ ಮುಖ್ಯ ಎಂದ ಅವರು, ಇಂತಹ ಹಲವಾರು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಶಿಕ್ಷಕರು ಕಾಳಜಿ ವಹಿಸಿದರೆ ಮಾತ್ರ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ನೂತನ ತಂತ್ರಜ್ಞಾನಗಳ ಅವಿಷ್ಕಾರಗಳಿಂದ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ. ಹೊಸ ಅವಿಷ್ಕಾರಗಳಿಂದ ಸಂವಹನ ಅಭಿವೃದ್ಧಿಯಾಗಿ, ಟೆಲಿಗ್ರಾಂ ಸ್ಥಗಿತಗೊಳ್ಳಲು ಪ್ರಮುಖ ಕಾರಣವಾಯಿತು ಎಂದ ಅವರು, ಪ್ರಾಥಮಿಕ ಶಾಲಾ ಹಂತದಲ್ಲಿ ಸಂಶೋಧನೆಗಳ ಕುರಿತು ತಿಳಿಹೇಳುವ ಕರ್ತವ್ಯ ಶಿಕ್ಷಕರು ಹಾಗೂ ಪೋಷಕರದು ಎಂದು ತಿಳಿಸಿದರು.
ಜಾಗೃತಿ ಮೂಡಿಸಿ: ಪ್ರತಿಯೊಂದು ವಯಸ್ಸಿನ ಮಕ್ಕಳಿಗೆ ಪ್ರಚಲಿತದಲ್ಲಿರುವ ಹಲವಾರು ಸಂಗತಿಗಳ ಕುರಿತಾಗಿ ತಿಳಿಹೇಳಿದರೆ ಸಂಶೋಧನೆಗಳ ಆಕರ್ಷಣೆಗೆ ಒಳಗಾಗಿ, ನೂತನ ಅವಿಷ್ಕಾರಗಳಿಗೆ ವಿದ್ಯಾರ್ಥಿಗಳು ಮುಂದಾಗುತ್ತಾರೆ. ವೈಜ್ಞಾನಿಕ ದೃಷ್ಟಿಕೋನಗಳನ್ನು ವಿದ್ಯಾರ್ಥಿಗಳು ಹೆಚ್ಚು ಬೆಳೆಸಿಕೊಳ್ಳಬೇಕು ಎಂದ ಅವರು, ವಿದ್ಯಾರ್ಥಿಗಳಲ್ಲಿ ಪ್ರೇರಣಾ ಶಕ್ತಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದ್ದು, ಚಿಂತನೆ, ದೃಷ್ಟಿಕೋನಗಳ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ನಗರಸಭಾ ಸದಸ್ಯ ಕಾಶಿವಿಶ್ವನಾಥ್, ಡಯಟ್ ಪ್ರಾಂಶುಪಾಲರಾದ ಚಂದ್ರಮ್ಮ, ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್, ಕಾಲೇಜಿನ ಉಪಪ್ರಚಾರ್ಯ ರಮೇಶ್, ನಾಗರಾಜ್, ಸೋಮಶೇಖರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.