ಹಂದಿಗಳ ಹಾವಳಿ ತಪ್ಪಿಸಲು ಮನವಿ
ಶಿರಾಳಕೊಪ್ಪ: ಶಿರಾಳಕೊಪ್ಪ ಪಟ್ಟಣದಲ್ಲಿ ಹಂದಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ನಾಗರಿಕರ ಮುಕ್ತ ಸಂಚಾರಕ್ಕೆ ಹಾಗು ವಾಹನಚಾರಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪಪಂ ಅವುಗಳ ನಿಯಂತ್ರಣಕ್ಕೆ ಮುಂದಾಗಿದೆ.
ಮುಖ್ಯಾಧಿಕಾರಿಗಳು ಹಂದಿಗಳಿಂದ ಪಟ್ಟಣದ ಸ್ವಚ್ಛತೆಗೆ ಧಕ್ಕೆ ಉಂಚಾಗುತ್ತಿದೆಹಾಗೆಯೇ ನಾಗರಿಕರ ಆರೋಗ್ಯದ ಮೇಲೆ ದುಷ್ಪರಿಣಾಮಬೀರುವ ಸಾಧ್ಯತೆ ಇದೆ ಎಂದಿದ್ದಾರೆ. ಹಾಗೆಯೇ ದನಗಳು ಪಟ್ಟಣದ ರಸ್ತೆಗಳಲ್ಲಿ ಬೇಕಾ ಬಿಟ್ಟಿಯಾಗಿ ತಿರುಗುತ್ತಿರುವದರಿಂದ ಹಾಗೂ ಬಸ್ ನಿಲ್ದಾಣ, ಕಚೇರಿ ಆವರಣ, ಶಾಲಾ ಕಾಲೇಜುಗಳ ಆವರಣದಲ್ಲಿ ಗಲೀಜು ಮಾಡುತ್ತಿರುವದಲ್ಲದೇ, ವಾಹನ ಸಂಚಾರಕ್ಕೆ ಧಕ್ಕೆ ಉಂಟುಮಾಡಿ ಸಾಕಷ್ಟು ಬಾರಿ ಅಫಘಾತ ಸಂಭವಿಸಲು ಕಾರಣವಾಗಿವೆ. ಕಡ್ಡಾಯವಾಗಿ ಅವುಗಳನ್ನು ತೆರವುಗೊಳಿಸದಿದ್ದರೆ ಕರ್ನಾಟಕ ಪುರಸಭೆ ಕಾಯಿದೆ 1964ರ ಅನ್ವಯ ಸಂಭಂಧಿಸಿದ ಮಾಲೀಕರ ಮೇಲೆ ದಂಡ ವಿಧಿಸಿ ಪಟ್ಟಣ ಪಂಚಾಯ್ತಿ ವತಿಯಿಂದ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ನಿಯಂತ್ರಿಸಲು ಕ್ರಮ ವಹಿಸಲಾಗುವದು ಎಂದು ಹೇಳಿಕೆಯಲ್ಲಿ ಪಪಂ ಮುಖ್ಯಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

