ಶಿವಮೊಗ್ಗ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅರ್ಜಿ ಆಹ್ವಾನ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.22
ಸಾರ್ವಜನಿಕ ಶಿಕ್ಷಣ ಇಲಾಖೆಯು 2014ನೇ ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲಾ- ಕಾಲೇಜುಗಳ ಮೂಲಕ ಅರ್ಜಿ ಆಹ್ವಾನಿಸಿದೆ.
ಖಾಸಗಿ ಅಭ್ಯರ್ಥಿಗಳು ವ್ಯಾಸಂಗ ಮಾಡದಿರುವ, ಅರ್ಧದಲ್ಲಿಯೇ ವ್ಯಾಸಂಗ ಮೊಟಕುಗೊಳಿಸಿರುವ ಅಥವಾ 2014ರ ಮಾರ್ಚ್ 1ಕ್ಕೆ 15ವರ್ಷಗಳ ವಯೋವಾನ ಪೂರ್ಣಗೊಳಿಸಿದವರು ನೇರವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಹರಾಗಿರುತ್ತಾರೆ.
ಪರೀಕ್ಷಾ ಶುಲ್ಕ 345: ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಲ್ಲಿ ಖಾಸಗಿ ಅಭ್ಯರ್ಥಿಯಾಗಿ ಹೆಸರು ನೋಂದಾಯಿಸಿಕೊಂಡು ಪರೀಕ್ಷಾ ಅರ್ಜಿಯನ್ನು ಪುನ- ಶಾಲೆಗೆ ನೀಡಿ ನಿಗದಿತ ಪರೀಕ್ಷಾ ಶುಲ್ಕ 345 ಸಂಬಂಧಿತ ಶಾಲೆಗಳಲ್ಲಿ ಪಾವತಿಸಬೇಕು. ಹೆಚ್ಚಿನ ವಿವರಗಳಿಗಾಗಿ ತಮ್ಮ ಸಮೀಪದ ಶಾಲಾ-ಕಾಲೇಜು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ  ಹಾಗೂ ಮಾಹಿತಿ ಪಡೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.