ಕಾರು ಅಪಘಾತ: ವ್ಯಕ್ತಿ ಸಾವು
ಸಾಗರ/ಜೋಗ: ತಾಲೂಕಿನ ಜೋಗಕ್ಕೆ ಹೋಗುವ ಮಾರ್ಗದ ಸೀತಾಕಟ್ಟೆ ಬ್ರಿಡ್ಜ್ ಸಮೀಪ ಟಾಟಾ ಇಂಡಿಕಾ ಕಾರು ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ದಾವಣಗೆರೆಯಿಂದ ಜೋಗ ನೋಡಲು ಟಾಟಾ ಇಂಡಿಕಾ ಕಾರಿನಲ್ಲಿ ಐದು ಜನರ ತಂಡ ಬಂದಿತ್ತು. ಸೀತಾಕಟ್ಟೆ ಬ್ರಿಡ್ಜ್ಬಳಿ ಕಾರು ತಿರುಗಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿರಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮಂಜುನಾಥ್ (32) ಎಂಬಾತ ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಚಿಕ್ಕಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಜೋಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಲು ಹೋಗಿ ಸಾವು
ವಿಶ್ವವಿಖ್ಯಾತ ಜೋಗಜಲಪಾತದ ಆಳದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಶಿವಮೊಗ್ಗದ ಗೆಜ್ಜೆನಹಳ್ಳಿಯ ದಿವಾಕರ (24) ಎಂಬಾತ ತನ್ನ ಸ್ನೇಹಿತರೊಂದಿಗೆ ಭಾನುವಾರ ಜಲಪಾತ ವೀಕ್ಷಣೆಗೆ ಬಂದಿದ್ದನು. ಮೆಟ್ಟಿಲ ಮೂಲಕ ಜೋಗ ಜಲಪಾತದ ಆಳಕ್ಕೆ ಇಳಿದಿದ್ದ ಈ ತಂಡ ಸ್ವಲ್ಪಹೊತ್ತು ಅಲ್ಲಿಯೇ ವಿಹರಿಸಿದೆ. ನಂತರ ಲೋಕಾನಾಯ್ಕ ಕೆಳಗೆ ಈಜಲು ಹೋಗಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದಾನೆ.
ಈತನಕ ಯುವಕನ ಶವ ಪತ್ತೆಯಾಗಿಲ್ಲ. ಈ ಸಂಬಂಧ ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

