ಡೆಂಘೀ ತಡೆಗೆ ಸೂಕ್ರ ಕ್ರಮ ಕೈಗೊಳ್ಳಲು ಆಗ್ರಹ
ಶಿವಮೊಗ್ಗ, ಜು.23 ಡೆಂಘೀ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಸೇರಿದಂತೆ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಡೆಂಘೀ ಹರಡುತ್ತಿದ್ದು, ಹತ್ತಾರು ಜನ ಜೀವವನ್ನೇ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರೋಗ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಕೆಲ ಪ್ರದೇಶಗಳಿಗೆ ಮಾತ್ರ ಈ ಕಾರ್ಯಕ್ರಮ ಸೀಮಿತವಾಗಿದ್ದು, ಗ್ರಾಮೀಣ ಮತ್ತು ಕೊಳಚೆ ಪ್ರದೇಶಗಳ ಕಡೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಪ್ರತಿಭಟನಕಾರರು ದೂರಿದರು.
ರೋಗಭೀತಿ ಹೆಚ್ಚಳ: ನಗರದ ಶಾಂತಿನಗರ, ಮಾರ್ನಾಮಿಬೈಲ್, ಟಿಪ್ಪುನಗರ, ನ್ಯೂಮಂಡ್ಲಿ, ಲಷ್ಕರ್ ಮೊಹಲ್ಲಾ, ಅಂಗಳಯ್ಯನ ಕೆರೆ, ಮಿಳಘಟ್ಟಕೆರೆ ಅಂಗಳ, ಮಂಜುನಾಥ ಬಡಾವಣೆ, ಸೋಮಿನಕೊಪ್ಪ ಸೇರಿದಂತೆ ಇತರೆ ಕೊಳಚೆ ಪ್ರದೇಶಗಳಲ್ಲಿ ಡೆಂಘೀ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಕೆಲ ದಿನಗಳ ಹಿಂದೆ 9 ತಿಂಗಳ ಮಗುವೊಂದು ಮೃತಪಟ್ಟಿದೆ. ಆದರಿಂದ ಅಕ್ಕಪಕ್ಕದ ನಿವಾಸಿಗಳು ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಜಿಲ್ಲಾಡಳಿತ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ಪ್ರತಿ ವಾರ್ಡ್ಗಳಲ್ಲಿಯೂ ಡೆಂಘೀ ಬಗ್ಗೆ ಜಾಗೃತಿ ಮೂಡಿಸಬೇಕು. ಕೊಳಚೆ ಪ್ರದೇಶಗಳಲ್ಲಿ ಬಡ, ಮಧ್ಯಮ ವರ್ಗದ ಜನ ವಾಸಮಾಡುವ ಸ್ಥಳಗಳಲ್ಲಿ ನಗರಸಭೆಯಿಂದ ಒಳಚರಂಡಿಗಳಲ್ಲಿ ತುಂಬಿರುವ ಕಸ ವಿಲೇವಾರಿಮಾಡಿ, ನಗರ ನೈರ್ಮಲ್ಯ ಕಾಪಾಡಬೇಕು ಹಾಗೂ ರೋಗ ನಿಯಂತ್ರಣದ ಕಡೆ ಗಮನಹರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ, ಶಾಂತಮ್ಮ, ನಗರಾಧ್ಯಕ್ಷ ಮಂಜುನಾಥ್, ಗ್ರಾಮಾಂತರ ಅಧ್ಯಕ್ಷ ನರಸಿಂಹ, ರೀಟಮ್ಮ, ಜಯಲಕ್ಷ್ಮೀ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

