ಇಂದಿನಿಂದ 26ರ ವರೆಗೆ ಸಂಚಾರಿ ಲೋಕ ಅದಾಲತ್
ಶಿವಮೊಗ್ಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ ಹಾಗೂ ವಾರ್ತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜುಲೈ 24ರಿಂದ 26ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥಯಾತ್ರೆಯ ಮೂಲಕ ಸಂಚಾರಿ ಲೋಕ ಅದಾಲತ್ ಮತ್ತು ಕಾನೂನು ಸಾಕ್ಷರತೆ ಹಾಗೂ ನೆರವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜುಲೈ 24ರಂದು ಬೆಳಿಗಗೆ 10.15ಕ್ಕೆ ನಗರದ ಕೋರ್ಟ್ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ.ಶೆಟ್ಟರ್ ಉದ್ಘಾಟಿಸುವರು.
ಅಂದು ಬೆಳಿಗ್ಗೆ 11ಗಂಟೆಗೆ ಮಾಚೇನಹಳ್ಳಿಯ ಅಂಗನವಾಡಿ ಕೇಂದ್ರದ ಸಭಾಭವನದಲ್ಲಿ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೆ. ಸುಬ್ರಹ್ಮಣ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ತಾಲೂಕು ಪಂಚಾಯಿತಿ ಸದಸ್ಯ ಸೋಮಶೇಖರ್, ನಿಧಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಬಸಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಗುತ್ಯಪ್ಪ ಅವರು ಮುಖ್ಯ ಅತಿಥಿಯಾಗಿಗಿ ಆಗಮಿಸಲಿರುವರು. ವಕೀಲರ ಸಂಘದ ಅಧ್ಯಕ್ಷ ಅಶೋಕ ಜಿ. ಭಟ್ ಅಧ್ಯಕ್ಷತೆ ವಹಿಸುವರು. ವಕೀಲ ಎಂ.ಎಸ್. ಹಾಲಪ್ಪಗೌಡರು ಮತ್ತು ಎಂ.ಎಚ್. ಉದಯಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಜನಸಾಮಾನ್ಯರಿಗಾಗಿ ಕಾನೂನು ಮತ್ತು ಅಪರಾಧಿತ ಕಾನೂನುಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

