ಶಿವಮೊಗ್ಗ

ಇಂದು ಸಂವಾದ

Published On :

ಜೋಗ್‌ಫಾಲ್ಸ್: ಇಲ್ಲಿನ ಕ.ವಿ.ನಿ.ನಿ. ಪದವಿಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜು.26ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಖ್ಯಾತ ಸಾಹಿತಿ, ಕೇಂದ್ರ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕುಂ. ವೀರಭದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಕಥೆಗಾರ, ಉಪನ್ಯಾಸಕ ಸಿರ್ಸಿಯ ಕೇಶವರೆಡ್ಡಿ ಹಂದ್ರಾಳ್, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಜಿ. ಹನುಮಂತಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಆಸಕ್ತ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲ ಎಸ್.ವಿ. ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಹರೋಹರ ಜಾತ್ರೆ
ಶಿವಮೊಗ: ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜು.30 ಹಾಗೂ 31ರಂದು ಆಡಿಕೃತ್ತಿಕೆ ಜಾತ್ರೆ ನಡೆಯಲಿದೆ. ಆಡಿಕೃತ್ತಿಕೆ ದಿನದಂದು ಭಕ್ತರು ವಿಶೇಷ ಹರಕೆಯ ಕಾವಡಿ ಸಲ್ಲಿಸಲಿದ್ದು, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ಮಳೆ ಯಾಚಿಸಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ದೇವಸ್ಥಾನ ಟ್ರಸ್ಟ್ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.