ಶಿವಮೊಗ್ಗ

ಮೂಲ ಸೌಲಭ್ಯ ಒದಗಿಸಲು ಒತ್ತಾಯ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.25
ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶೇಷಾದ್ರಿಪುರ ನಾಗರಿಕರ ಸಮಿತಿ ಸದಸ್ಯರು ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಿದರು.
ಮೂಲ ಸೌಕರ್ಯ ಕಲ್ಪಿಸುವಂತೆ ಈಗಾಗಲೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನೆನೆಗುದಿಗೆ ಬಿದ್ದಿರುವ ಕಾಮಗಾರಿಯನ್ನು ತ್ವರಿತವಾಗಿ ಕೈಗೊಂಡು ಬಡಾವಣೆ ಅಭಿವೃದ್ಧಿಗೆ ಸಹಕರಿಸುವಂತೆ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು.
ಸ್ವಚ್ಛತೆ ಮಾಯ: ಬಡಾವಣೆಯಲ್ಲಿ ಸ್ವಚ್ಛತೆ ಮಾಯವಾಗಿದ್ದು, ಎಲ್ಲೆಂದರಲ್ಲಿ ಕಸಕಡ್ಡಿ ರಾಶಿ ಕೊಳೆತು ನಾರುತ್ತಿದೆ. ಇದರಿಂದ ಈ ಭಾಗದಲ್ಲಿ ಸ್ವಚ್ಛತೆ ಕೊರತೆ ಎದುರಾಗಿದ್ದು, ರೋಗರುಜಿನ ಹರಡುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿಸಿದ  ನಗರಸಭೆ ಅಧಿಕಾರಿಗಳು ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಶೇಷಾದ್ರಿಪುರ ಬಡಾವಣೆಯಲ್ಲಿ ಕುಡಿವ ನೀರಿನ ತೊಂದರೆ ಇದ್ದು, ಸೂಕ್ತ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅದೇ ರೀತಿ ಬಾಕ್ಸ್ ಚರಂಡಿ ಮಾಡಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆದಿಲ್ಲ. ಕಳಪೆ ಕಾಮಗಾರಿ ಕೂಡ ನಡೆದಿದೆ ಎಂದು ಆಪಾದಿಸಲಾಗಿದೆ. ಮನವಿ ಸಲ್ಲಿಕೆ ಸಂದರ್ಭದಲ್ಲಿ ವಿಜಯಕುಮಾರ್, ಆರ್.ಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.