ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಸಾಗರ: ಹವ್ಯಕ ಜನಾಂಗ ತನ್ನ ಚಿಂತನಾಶಕ್ತಿಯಿಂದ ತನ್ನತನವನ್ನು ಉಳಿಸಿಕೊಂಡು ಬರುತ್ತಿದೆ ಎಂದು ವಾಗ್ಮಿ ಶಂಕರ ಶಾಸ್ತ್ರಿ ಹೇಳಿದರು.
ಇಲ್ಲಿನ ಹವ್ಯಕ ಸಾಗರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ, ಹವ್ಯಕ ಜನಾಂಗದಲ್ಲಿರುವ ಸಂಸ್ಕೃತಿ ಹಾಗೂ ಸಂಸ್ಕಾರ ಪ್ರತಿಭಾವಂತರ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು.
ಒಂದು ಕಾಲದಲ್ಲಿ ಕನ್ನಡಕ್ಕೆ ಪ್ರಧಾನ ಶಬ್ದಗಳನ್ನು ಕೊಟ್ಟ ಹವ್ಯಕ ಭಾಷೆ ನೇಪಥ್ಯಕ್ಕೆ ಸರಿಯುತ್ತಿರುವ ಬಗ್ಗೆ ಜನಾಂಗ ಬಾಂಧವರು ಗಂಭೀರವಾಗಿ ಚಿಂತಿಸಬೇಕು. ಜನಾಂಗದ ಯುವಪೀಳಿಗೆ ಹವ್ಯಕ ಭಾಷೆ, ಸಂಸ್ಕೃತಿಯನ್ನು ಕಡೆಗಣಿಸುತ್ತಿದ್ದಾರೆ. ಅಂಕಗಳಿಕೆಯೊಂದೆ ಪ್ರತಿಭೆ ಹಾಗೂ ಉದ್ಯೋಗ ಸಂಪಾದನೆಗೆ ಮಾನದಂಡ ಎಂಬ ಮನೋಭಾವ ಯುವಜನರಲ್ಲಿ ಜಾಗೃತವಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಶೋಧಕ ಎಚ್.ಎಂ. ತಿಮ್ಮಪ್ಪ, ಪ್ರತಿ ಜಾತಿಜನಾಂಗಗಳಿಗೂ ಅದರದ್ದೆ ಆದ ಪರಂಪರೆ ಇರುತ್ತದೆ. ಅದನ್ನು ಅರ್ಥ ಮಾಡಿಕೊಳ್ಳುವ ಕೆಲಸವಾಗಬೇಕು. ಹವ್ಯಕ ಜನಾಂಗದವರು ಯಾವುದೆ ಕಾರಣಕ್ಕೂ ತಮ್ಮತನವನ್ನು ಕಳೆದುಕೊಳ್ಳಬಾರದು. ಬದಲಾವಣೆ ಸಹಜವಾದರೂ, ಬದಲಾವಣೆ ಆರೋಗ್ಯಕರವಾಗಿರಬೇಕು. ನಮ್ಮ ಆಚಾರ ವಿಚಾರಗಳಿಗೆ ವಿರುದ್ಧವಾದ ಬದಲಾವಣೆಗೆ ನಮ್ಮನ್ನು ನಾವು ತೆರೆದುಕೊಂಡಾಗ ನಾವು ನಾವಾಗಿ ಉಳಿಯುವುದಿಲ್ಲ ಎನ್ನುವ ಎಚ್ಚರಿಕೆ ಅಗತ್ಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಹವ್ಯಕ ಜನಾಂಗದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಘಟನೆಯ ಗೌರವಾಧ್ಯಕ್ಷ ಎನ್.ಎಸ್. ಮಂಕಾಳೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಎಚ್.ಕೆ. ವೆಂಕಟೇಶ್ಜೋಯಿಸ್, ಕಾರ್ಯದರ್ಶಿ ಲಲಿತಾ ವಿ.ರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

