ಶಿವಮೊಗ್ಗ

ರಾಜ್ಯ ಮಟ್ಟದ ಕಾರ್ಯಾಗಾರ

Published On :

ಶಿವಮೊಗ್ಗ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಗಸ್ಟ್ 3ರಿಂದ 5ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಯುವ ಸಮ್ಮೇಳನ, ತರಬೇತಿ ಮತ್ತು ಕಾರ್ಯಾಗಾರ ಏರ್ಪಡಿಸಿದೆ. ಕಾರ್ಯಾಗಾರಕ್ಕೆ ರಾಜ್ಯದ 30 ಜಿಲ್ಲೆಗಳ ಯುವಕ-ಯುವತಿಯರು ಭಾಗವಹಿಸಲಿದ್ದು, ವಿವಿಧ ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ, ಜನಪದ ಕಲೆಗಳ ಬಗ್ಗೆ ತರಬೇತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ನೋಂದಣಿಯಾಗಿರುವ ಪ್ರತಿ ಯುವಕ-ಯುವತಿ ಸಂಘಗಳಿಂದ 10ಜನರಂತೆ ಭಾವಹಿಸಲು ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸಲಿಚ್ಚಿಸುವ ಸಂಘಗಳ ಸದಸ್ಯರು ಆಗಸ್ಟ್ 3ರಂದು ಬೆಳಿಗ್ಗೆ 9ಗಂಟೆಯೊಳಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಭಾಗವಹಿಸುವ ಸಂಘಗಳ ಸದಸ್ಯರಿಗೆ ಪ್ರಯಾಣ ಭತ್ಯೆ ಹಾಗೂ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೂರ ಮತ್ತು ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಶುಶ್ರೂಷಕ ದಾದಿಯರ ಒಂದು ಹುದ್ದೆಗೆ ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ -3ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ನಿಗದಿತ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಗುಂಬೆಯಲ್ಲಿ ಶುಶ್ರೂಷಕ ದಾದಿಯರ -1 ಹುದ್ದೆ ಹಾಗೂ ಯಡೂರು, ಸಂಪೆಕಟ್ಟೆ ಹಾಗೂ ನಿಟ್ಟೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 3 ಹುದ್ದೆಗೆ ಯೋಜನೆಯ ನಿಯಮಾನುಸಾರ ಆಯ್ಕೆ ನಡೆಯಲಿದೆ. ಆಗುಂಬೆ, ನಿಟ್ಟೂರು, ಸಂಪೆಕಟ್ಟೆ ಮತ್ತು ಯಡೂರು ಗ್ರಾಮಗಳ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ವಜುಲೈ 31ರೊಳಗಾಗಿ ತೀರ್ಥಹಳ್ಳಿ ಅಥವಾ ಹೊಸನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.