ಶಿವಮೊಗ್ಗ

ರಾಷ್ಟ್ರಮಟ್ಟಕ್ಕೆ ಆಕರ್ಷ ಆಯ್ಕೆ

Published On :

ಶಿರಾಳಕೊಪ್ಪ: ಸೆಂಟ್ರಲ್ ಸಿಲೆಬಸ್‌ನ ಐಸಿಎಸ್‌ಇ ಶಾಲೆಗಳ ರಾಜ್ಯ ಮಟ್ಟದ ಕ್ರೀಡಾಕೂಟ ಇತ್ತೀಚೆಗೆ ನಡೆದು ಶಿಕಾರಿಪುರ ಅಕ್ಷರ ರೆಸಿಡೆನ್ಸಿಯಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಿರಾಳಕೊಪ್ಪ ಪಟ್ಟಣದ ಬಿಎನ್ ಆಕರ್ಷ ಗುಂಡುಎಸೆತದಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ.
ಡಿಸ್ಕ್ ಎಸೆತದಲ್ಲಿ ಕಂಚಿನಪದಕ ಪಡೆದಿದ್ದಾನೆ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ
ಪಡೆದ ಆಕರ್ಷ ಕೇರಳದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.