ನಾಳೆ ಬಾಗಿನ ಅರ್ಪಣೆ
ಶಿವಮೊಗ್ಗ: ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ಮುಖಂಡರು ಜುಲೈ 31ರಂದು ತುಂಬಿದ ತುಂಗಾ ನದಿಗೆ ಬಾಗಿನ ಅರ್ಪಿಸಲಿದ್ದಾರೆ. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ತುಂಗಾ ನದಿಗೆ (ಗಾಜನೂರು ಅಣೆಕಟ್ಟಿನಲ್ಲಿ) ಬಾಗಿನ ಅರ್ಪಿಸಲಿದ್ದಾರೆ. ಈ ವೇಳೆ ಪಕ್ಷದ ಜಿಲ್ಲಾ ಘಟಕ ಹಾಗೂ ಮಹಿಳಾ ಘಟಕ, ನಗರ ಘಟಕದ ಎಲ್ಲಾ ಪದಾಧಿಕಾರಿಗಳು 31ರಂದು ಬೆಳಿಗ್ಗೆ 10ಗಂಟೆಗೆ ಆಗಮಿಸುವಂತೆ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್ ಕೋರಿದ್ದಾರೆ.
ಪದಾಧಿಕಾರಿಗಳ ಆಯ್ಕೆ
ಶಿವಮೊಗ್ಗ: ಶಿವ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಅಧ್ಯಕ್ಷರಾಗಿ ಹೊಳಲೂರಿನ ಎಂ. ಕಲ್ಯಾಣಪ್ಪ, ತೇವರಚಟ್ನಹಳ್ಳಿಯ ಎಚ್.ಬಿ. ಕರಿಬಸಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಡಿ. ತೀರ್ಥಲಿಂಗಪ್ಪ, ಎಸ್. ಮಲ್ಲಪ್ಪ, ಗಿರಿಜಮ್ಮ, ಈ.ಜಿ. ರುದ್ರೇಶಪ್ಪ, ಎಸ್.ಎ. ಪಾಟೀಲ್, ಎಚ್.ಈ. ಗಡ್ಲಬಸಪ್ಪ, ಎನ್. ಮಹೇಶ್ವರಪ್ಪ, ಜಿ.ಎಸ್. ಭರತೇಶ್, ಜಿ.ಬಿ. ಜಗದೀಶ್, ಎಂ.ಈ. ಜ್ಞಾನೇಶ್ವರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರ
ಶಿವಮೊಗ್ಗ: ಜಿಲ್ಲಾ ದೇವಾಂಗ ಸಂಘ ದೇವಾಂಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.60ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ, ಡಾಕ್ಟರೇಟ್, ಎಂಫಿಲ್ ಹಾಗೂ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಹುಮಾನ ಪಡೆದವರು ಆ.6ರೊಳಗೆ ಡಿ. ಭೋಜರಾಜ್, ಪ್ರಧಾನ ಕಾರ್ಯದರ್ಶಿ, ದೇವಾಂಗ ಸಮಾಜ, ಬಾಪೂಜಿ ನಗರ, ಶಿವಮೊಗ್ಗ ಇಲ್ಲಿಗೆ ಕಳುಹಿಸಬಹುದು ಎಂದು ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ. ವಿವರಗಳಿಗಾಗಿ- 9972575071.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

