'ಮಕ್ಕಳ ಪ್ರತಿಭೆ ಗುರುತಿಸಿ'
ಕ.ಪ್ರ.ವಾರ್ತೆ ಶಿವಮೊಗ್ಗ ಜು.29 ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಅದರ ಅರಿವು ಮೂಡಿಸುವ ಕೆಲಸ ಶಿಕ್ಷಕರದಾಗಿರುತ್ತದೆ. ಜೊತೆಗೆ ಸೇವಾಸಂಸ್ಥೆಗಳ ಕರ್ತವ್ಯವಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ ತಿಳಿಸಿದರು.
ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಇನ್ನರ್ವೀಲ್ ಕ್ಲಬ್ನಿಂದ ಹಮ್ಮಿಕೊಳ್ಳಲಾದ ಪ್ರತಿಭಾ ಪುರಸ್ಕಾರ, ನೋಟ ಪುಸ್ತಕ ಹಾಗೂ ಶಬ್ದಕೋಶ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬಿಳಿಗೋಡೆ ಇದ್ದಂತೆ: ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಎಲ್.ಜ್ಯೋತಿ ರೋಟರಿ ಸಂಸ್ಥೆಯ ಸೇವಾ ಕಾರ್ಯಗಳನ್ನು ಪ್ರಶಂಸಿಸಿದರು. ವಿದ್ಯಾರ್ಥಿಗಳ ಮನಸ್ಸು ಬಿಳಿಗೋಡೆ ಇದ್ದ ಹಾಗೇ, ನಾವು ಏನನ್ನು ಬರೆಯುತ್ತೇವೆ ಅದು ಹಾಗೆ ಅಚ್ಚೊತ್ತುತ್ತದೆ ಎಂದರು.
ರೋಟರಿಪೂರ್ವ ಸಂಸ್ಥೆ ಅಧ್ಯಕ್ಷ ಕೆ.ಎಸ್. ಪುರುಷೋತ್ತಮ ಅವರು 12 ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಶಬ್ದಕೋಶ, ನೋಟ್ ಪುಸ್ತಕ, ಲೇಖನ ಸಾಮಗ್ರಿಗಳನ್ನು ವಿತರಿಸಿದರು. ರೋಟರಿ ವಿದ್ಯಾಸಂಸ್ಥೆ ಅಧ್ಯಕ್ಷ ಜಿ. ವಿಜಯಕುಮಾರ ಮಾತನಾಡಿ, ಇಂಟರ್ಯಾಕ್ಟ್ ಕ್ಲಬ್ ಮಾನವೀಯ ಸಂಬಂಧಗಳನ್ನು ಸೇವಾಗುಣಗಳನ್ನು ಗಟ್ಟಿಗೊಳಿಸುವ ಒಂದು ಸೇತುವೆ, ಇಂತಹ ಸಂಸ್ಥೆಗಳ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪ್ರತಿಭಾ ಪುರಸ್ಕಾರ: 2012-13ರಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ವಿನಯ ಎಂ.ಜಿ, ಪವನಕುಮಾರ, ಶಿವರಾಜ್.ಎಚ್ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದರು. ರೋಟರಿ ಪೂರ್ವ ಸಂಸ್ಥೆ ಕಾರ್ಯದರ್ಶಿ ಬಿ. ಪ್ರಸನ್ನಕುಮಾರ, ಇನ್ನರ್ವೀಲ್ ಕಾರ್ಯದರ್ಶಿ ಶ್ವೇತಾ ಅಶಿತ್, ಬಿ.ಎಚ್. ನಿರಂಜನ ಮೂರ್ತಿ, ಡಿ.ಎಸ್. ಪ್ರಭು, ಬಿಂದು ವಿಜಯಕುಮಾರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

