'ಹಿಂಜರಿಕೆ ಸ್ವಭಾವ ಬಿಟ್ಟ ಬಿಡಿ'
ಶಿವಮೊಗ್ಗ: ಮಹಿಳೆಯರು ಹಿಂಜರಿಕೆ ಸ್ವಭಾವವನ್ನು ಬಿಟ್ಟು ಮುಖ್ಯವಾಹಿನಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸಲಹೆ ನೀಡಿದರು.
ಗೋಪಾಳದ ಲಲಿತಾ ಮಹಿಳಾ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯ ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಅವರು, ಸಮಾಜದಲ್ಲಿ ಸಾಕಷ್ಟು ಅವಕಾಶಗಳಿರುತ್ತದೆ. ಇದರಿಂದ ಹಿಂದಕ್ಕೆ ಸರಿಯಬೇಡಿ. ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬರಬೇಕು. ಇದರಿಂದಾಗಿ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳಬಹುದಾಗಿದೆ. ಯಾರ ಮೇಲೂ ಅವಲಂಬಿತವಾಗುವ ಅನಿವಾರ್ಯತೆ ಇಲ್ಲವಾಗುತ್ತದೆ ಎಂದರು.
ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು. ಇದಕ್ಕಾಗಿ ಸ್ವಸಹಾಯ ಸಂಘಗಳ ಮೂಲಕ ವಿವಿಧ ಉದ್ಯಮಗಳನ್ನು ಸ್ಥಾಪಿಸಬಹುದಾಗಿದೆ. ಇದಕ್ಕೆ ಸರ್ಕಾರ ಆರ್ಥಿಕ ನೆರವನ್ನು ನೀಡುತ್ತದೆ.
ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಮುಂದೆ ಬರಬೇಕು. ಇಂತಹ ಯಾವುದೇ ಯೋಜನೆಗೆ ಶಾಸಕನಾಗಿ ನಾನು ಎಲ್ಲ ನೆರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರಲ್ಲದೆ, ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ ಎಂದರು.
ಶಿವಮೊಗ್ಗವನ್ನು ಮಾದರಿ ನಗರವನ್ನಾಗಿ ಗುರಿ ಹೊಂದಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಂಗಳಾ ಪ್ರಕಾಶ್ ವಹಿಸಿದ್ದರು. ಉಷಾ ರಮೇಶ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಲತಾ ಯಡಗೆರೆ ಅತಿಥಿಗಳನ್ನು ಪರಿಚಯಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ವಿಶ್ವನಾಥ್ ಕಾರ್ಯಕ್ರಮದ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

