ಶಿವಮೊಗ್ಗ

ಅತಿವೃಷ್ಟಿ: ಮುಂಜಾಗ್ರತೆ ಕ್ರಮ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜು.29
ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾತಾವರಣದಲ್ಲಿ ಏರುಪೇರು ಆಗಿರುವುದರಿಂದ ಆರೋಗ್ಯ ಇಲಾಖೆ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಪ್ರವಾಹ ಪೀಡಿತ ಪ್ರದೇಶವೆನಿಸಿದ ಜಿಲ್ಲೆಯ ತೀರ್ಥಹಳ್ಳಿ, ಸೊರಬ, ಸಾಗರ, ಹೊಸನಗರ, ಭದ್ರಾವತಿ ತಾಲೂಕು ಸೇರಿದಂತೆ ವಿವಿಧೆಡೆ ಕುಡಿಯುವ ನೀರಿನ ಪರೀಕ್ಷೆ ಹಾಗೂ ಈ ಕುರಿತು ನಿಗಾ ವಹಿಸಿದ್ದು, ಕುಡಿಯುವ ನೀರಿನ ಕಲಬೆರಕೆ ಸಂಭವ ಇರುವುದರಿಂದ ಮುಂಜಾಗ್ರತೆಯಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಲೋಝೋನ್ ಮಾತ್ರೆಗಳನ್ನು ಸರಬರಾಜು ಮಾಡಿದೆ ಎಂದು ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ಬಗ್ಗೆ ವರದಿಯಾಗಿಲ್ಲ. ಆದರೂ, ಉಷ್ಣಾಂಶದಲ್ಲಿ ವ್ಯತ್ಯಾಸ ಆಗಿರುವುದರಿಂದ ಹಾಗೂ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತಿರಿಕ್ತ ಪರಿಣಾಮ ಸಂಭವಿಸಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಿವಣ್ಣರೆಡ್ಡಿ ತಿಳಿಸಿದ್ದಾರೆ. ಪ್ರವಾಹ ಅಥವಾ ಅತಿವೃಷ್ಟಿ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರಕೃತಿ ವಿಕೋಪ ಪರಿಹಾರ ತಂಡ ರಚಿಸಲಾಗಿದ್ದು, ಜಿಲ್ಲಾಧಿಕಾರಿಗಳಿಂದ ಕರೆ ಬಂದಲ್ಲಿ, ಕೆಲಸ ಮಾಡಲು ಆರೋಗ್ಯ ಇಲಾಖೆ ಎಲ್ಲಾ ರೀತಿಯಿಂದ ಸಿದ್ಧತೆ ಮಾಡಿಕೊಂಡಿದೆ ಎಂದು ಶಿವಣ್ಣ ರೆಡ್ಡಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.