ಸಂಕುಚಿತ ಭಾವನೆ ತೊರೆದು ಅಭಿವೃದ್ಧಿಗೆ ಸಹಕರಿಸಿ
ಕ.ಪ್ರ.ವಾರ್ತೆ, ಶಿಕಾರಿಪುರ, ಜು.30 ಗ್ರಾಮೀಣ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅತೀ ಹೆಚ್ಚಿನ ಮಹತ್ವ ನೀಡುತ್ತಿದ್ದು, ಗ್ರಾಮಸ್ಥರು ಸಂಕುಚಿತ ಭಾವನೆ ತೊರೆದು ಕೇವಲ ಗ್ರಾಮದ ಅಭಿವೃದ್ಧಿ ಗಮನದಲ್ಲಿರಿಸಿ ಸಹಕರಿಸುವಂತೆ ಸಂಸದ ರಾಘವೇಂದ್ರ ಮನವಿ ಮಾಡಿದರು.
ಮಂಗಳವಾರ ತಾಲೂಕಿನ ಕಲ್ಮನೆಯಲ್ಲಿ ರಾಜೀವ್ ಗಾಂಧಿ ಭಾರತ್ ನಿರ್ಮಾಣ ಸೇವಾ ಕೇಂದ್ರ, ಕಿರಿಯ ಆರೋಗ್ಯ ಸೇವಾ ಕೇಂದ್ರ ಮತ್ತು ನೂತನ ಗರಡಿಮನೆ ಉದ್ಘಾಟಿಸಿ ಅವರು ಮಾತನಾಡಿ, ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾದ ಅವಧಿಯಲ್ಲಿ ಗ್ರಾಮೀಣ ಜನತೆಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಕಲ್ಪಿಸುವ ಮಹದಾಸೆಯಿಂದ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೆಚ್ಚಿನ ಅನುದಾನದ ಮೂಲಕ ಅಭಿವೃದ್ಧಿಗೊಳಿಸಿದ್ದಾರೆ ಎಂದರು.
ಅಧಿಕಾರ ಕ್ಷಣಿಕ: ಜಿಪಂ ಸದಸ್ಯ ಈಸೂರು ಬಸವರಾಜ್ ಮಾತನಾಡಿ, ಈಸೂರು ಜಿಪಂ ವ್ಯಾಪ್ತಿಯ ಕಟ್ಟಿಗೆಹಳ್ಳದಲ್ಲಿನ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮೂಲ ಸೌಲಭ್ಯದ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರಕಿಸುವಲ್ಲಿ ಹೆಚ್ಚಿನ ಗಮನಹರಿಸಲಾಗಿದ್ದು, ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಲು ಸೂಚಿಸಿದರು.
ತಾಪಂ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಪಂ ಮೂಲಕ ಸರ್ಕಾರ ಅನುದಾನ ನೀಡುತ್ತಿದ್ದು, ಪಕ್ಷಭೇದ ಮರೆತು ಗ್ರಾಮದ ಅಭಿವೃದ್ಧಿಗೆ ಸಹಕರಿಸಿದಲ್ಲಿ ಸಂಪೂರ್ಣ ಅಭಿವೃದ್ಧಿ ಸಾಧ್ಯ ಎಂಬುದನ್ನು ಗಮನದಲ್ಲಿರಿಸಿಕೊಳ್ಳಲು ತಿಳಿಸಿದರು.
ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಸುಲೋಚನಾ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಸಂಗಪ್ಪ, ತಾಪಂ ಉಪಾಧ್ಯಕ್ಷೆ ಸರೋಜಮ್ಮ, ಸದಸ್ಯರಾದ ಕರಿಬಸಮ್ಮ, ಇಒ ಡಾ. ಚಂದ್ರಶೇಖರಪ್ಪ, ಕಲ್ಮನೆ ಮಲ್ಲೇಶಪ್ಪ, ತಾ. ವೈದ್ಯಾಧಿಕಾರಿ ಡಾ. ನಾಗರಾಜನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

