ಗೋರಖ್ ಸಿಂಗ್ ವರದಿ ಜಾರಿಗೊಳಿಸಿ
ಶಿವಮೊಗ್ಗ: ಮಲೆನಾಡು ಅಡಕೆ ಬೆಳೆಗಾರರ ಹಿತದೃಷ್ಟಿಯಿಂದ ಕೂಡಲೇ ಗೋರಕ್ಸಿಂಗ್ ವರದಿಯನ್ನು ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೋರಕ್ಸಿಂಗ್ ವರದಿ ಜಾರಿಗೆ ಒತ್ತಾಯಿಸಿ ಈ ಹಿಂದೆ ಕೆಜೆಪಿ ಮುಖಂಡ ಆರ್.ಎಂ. ಮಂಜುನಾಥಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ನಾಯಕರು ಪಾಲ್ಗೊಂಡಿದ್ದರು ಎಂದರು.
ಗೋರಕ್ಸಿಂಗ್ ವರದಿ ನೀಡುವ ಸಮಯದಲ್ಲಿಯೇ ಬೇರೆ ಸಮಸ್ಯೆ ಇತ್ತು. ನಂತರವೇ ಬೇರೆ ಸಮಸ್ಯೆಯನ್ನು ಅಡಕೆ ಬೆಳೆಗಾರರು ಎದುರಿಸುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದರು.
ಮೈಲುತುತ್ತ ವಿತರಣೆಗೆ ಆಗ್ರಹ: ಈ ಬಾರಿ ಅಧಿಕ ಮಳೆ ಬಿದ್ದ ಪರಿಣಾಮ ತೀರ್ಥಹಳ್ಳಿ, ಸಾಗರ, ಸೊರಬ ಹಾಗೂ ಹೊಸನಗರ ಭಾಗದಲ್ಲಿ ಅಡಕೆಗೆ ಕೊಳೆರೋಗ ಹೆಚ್ಚಾಗಿದೆ. ಯಡಿಯೂರಪ್ಪ ಸಿಎಂ ಯಾಗಿದ್ದಾಗ ಶೇ.50 ಸಬ್ಸಿಡಿಯಲ್ಲಿ ಮೈಲುತುತ್ತ ವಿತರಿಸಲಾಗಿತ್ತು. ಆದರೆ, ಈಗ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು ಹೆಚ್ಚಿನ ಹಣ ತೆತ್ತು ಮೈಲುತುತ್ತ ಖರೀದಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಬ್ಸಿಡಿ ದರದಲ್ಲಿ ಮೈಲುತುತ್ತ ಪೂರೈಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

