ಶಿವಮೊಗ್ಗ

ಶಿವಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Published On :

ಭದ್ರಾವತಿ: ಆಡಿ ಕೃತ್ತಿಕಾ ಜಾತ್ರೆ ಮಾಸದ ಅಂಗವಾಗಿ ಪಟ್ಟಣದ ಸಮೀಪದ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.
 ಮಂಗಳವಾರ ಭರಣಿ ಕಾವಡಿ ಉತ್ಸವದ ಪ್ರಯುಕ್ತ ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಸಂಜೆ ವಿಶೇಷ ಪೂಜೆ ಮತ್ತು ರಾತ್ರಿ 12 ಗಂಟೆಗೆ ಭದ್ರಗಿರಿಯ ಶ್ರಿ ತವತ್ತಿರು ಸ್ವಾಮಿಗಳ ನೇತೃತ್ವದಲ್ಲಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಹಾಗೂ ಪಂಚಾಮೃತಾಭಿಷೇಕಗಳು ನಡೆದವು.
 ಬುಧವಾರ ಬೆಳಗ್ಗೆ 5 ಗಂಟೆಗೆ ವಿಶೇಷ ಪೂಜೆ ಪ್ರಾರಂಭವಾಯಿತು. ವಿಶ್ವರೂಪ ದರ್ಶನದ ನಂತರ ಬೆಳಗ್ಗೆ 8 ಗಂಟೆಗೆ ಬೆಳಗಿನ ಪೂಜೆ ನೆರವೇರಿಸಲಾಯಿತು. ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ನಂತರ ಶ್ರೀ ತವತ್ತಿರು ಸ್ವಾಮಿಗಳು ಅನ್ನಸಂತರ್ಪಣೆಯನ್ನು ಉದ್ಘಾಟಿಸಿದರು.
 ತಮಿಳುನಾಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಶಿವಸುಬ್ರಮಣ್ಯ ಸ್ವಾಮಿಗೆ 300 ಕಿಲೋಗ್ರಾಂ ತೂಕದ ಬೆಳ್ಳಿಯ ಕಾಮಧೇನು ಮತ್ತು 300 ಕಿಲೋಗ್ರಾಂ ತೂಕದ ಬೆಳ್ಳಿಯ ನಂದಿವಾಹನ ಹಾಗೂ ಪಂಚಮುಖಿ ಗಣಪತಿಗೆ 150 ಕಿಲೋಗ್ರಾಂ ತೂಕದ ಬೆಳ್ಳಿಯ ಮೂಷಿಕ ವಿಗ್ರಹಗಳನ್ನು ದಾನ ಮಾಡಿದ್ದು ವಿಶೇಷವಾಗಿತ್ತು.
--
ರವಿಕುಮಾರ್ ಆಯ್ಕೆ
ಶಿವಮೊಗ್ಗ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ- ಪಂಗಡಗಳ ಪತ್ರಿಕಾ ಸಂಪಾದಕರ ಸಂಘದ 2013-14ನೇ ಸಾಲಿನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ಟೆಲೆಕ್ಸ್ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.