ಗುಟ್ಕಾ ನಿಷೇಧ: ಪರಿಶೀಲನೆಗೆ ಒತ್ತಾಯ
ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.1
ಗುಟ್ಕಾ ನಿಷೇಧವು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದ್ದು ಸಾರ್ವಜನಿಕ ವಲಯದಲ್ಲಿ ಮುಕ್ತ ಚರ್ಚೆಗೆ ಅವಕಾಶ ನೀಡಿ ಸಾಧಕಬಾಧಕಗಳನ್ನು ಗಮನಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳುವವರೆಗೂ ಗುಟ್ಕಾ ನಿಷೇಧ ಆದೇಶವನ್ನು ಹಿಂತೆಗೆದುಕೊಂಡು ಪುನರ್ ಪರಿಶೀಲಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಡಕೆ ಬೆಳೆಯು ಮಲೆನಾಡು ಹಾಗೂ ಕರಾವಳಿ ಭಾಗದ ಮೂಲ ಕೃಷಿಯಾಗಿದೆ. ನಮ್ಮ ರಾಜ್ಯದಲ್ಲಿ ಭಾಗಶಃ ಹೆಚ್ಚು ಪ್ರದೇಶದಲ್ಲಿ ಅಡಕೆ ಬೆಳೆಗಾರರಿದ್ದು, ಇದನ್ನು ಅವಲಂಬಿತವಾಗಿ ಲಕ್ಷಾಂತರ ಜನರು ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಮಾಡುವುದರಿಂದ ರೈತರ ಹಾಗೂ ಕೃಷಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಗುಟ್ಕಾ ನಿಷೇಧದ ಹಿನ್ನೆಲೆಯಲ್ಲಿ ಅಡಕೆ ಬೆಲೆಯಲ್ಲಿ ಇಳಿ ಮುಖವಾಗುವುದರಿಂದ ರೈತರು ಆತಂಕದಲ್ಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಟ್ಕಾ ನಿಷೇಧ ಮಾಡಿದ ಹಾಗೆ ಇತರೆ ತಂಬಾಕು ಪದಾರ್ಥಗಳನ್ನು ಯಾಕೆ ನಿಷೇಧ ಮಾಡುತ್ತಿಲ್ಲ ಇದು ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂಬ ವಿಷಯ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ ಎಂದಿರುವ ಅವರು, ಗುಟ್ಕಾ ನಿಷೇಧಗೊಳಿಸುವ ಮೊದಲು ಸರ್ಕಾರ ಪರ್ಯಾಯ ಕ್ರಮಗಳನ್ನು ಕೈಗೊಂಡು ನಿರ್ಧಾರ ಕೈಗೊಳ್ಳಬೇಕಿತ್ತು ಎಂದಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ನಂತರ ಗುಟ್ಕಾ ನಿಷೇಧ ಕುರಿತು ತರಾತುರಿ ನಿರ್ಧಾರ ತೆಗೆದುಕೊಂಡಿರುವುದು ರೈತರ ಬದುಕಿನ ಮೇಲೆ ಬರೆ ಎಳೆಯುವಂತಹ ವ್ಯತಿರಿಕ್ತ ತೀರ್ಮಾನವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

