ಶಿವಮೊಗ್ಗ

ನಿಷೇಧಾಜ್ಞೆ ಜಾರಿ

Published On :

ಶಿವಮೊಗ್ಗ: ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಜೂನ್ 3ರಿಂದ 7ರವರೆಗೆ ಆಯೋಜಿಸಿರುವ ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ ಪೂರಕ ಪರೀಕ್ಷೆಯನ್ನು ಜಿಲ್ಲೆಯ ಶಿಮೊಗ್ಗ, ಭದ್ರಾವತಿ ಮತ್ತು ಸಾಗರ ತಾಲೂಕು ಕೇಂದ್ರಗಳ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಕರ್ನಾಟಕ ಲೋಕ ಸೇವಾ ಆಯೋಗ ಜೂನ್ 9 ಮತ್ತು 16ರಂದು ಅಬಕಾರಿ ಉಪನಿರೀಕ್ಷಕರು ಮತ್ತು ಅಬಕಾರಿ ರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಿರಲು ಮತ್ತು ಪರೀಕ್ಷಾ ಕೇಂದ್ರದ ಸುತ್ತ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ದಿನಗಳಂದು ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಆದೇಶ ಹೊರಡಿಸಿದ್ದಾರೆ.  ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ, ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತಲಿರುವ ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.