ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ
ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.3 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಕಲ್ಪಿಸಿಕೊಡಲು ಅರ್ಹ ಕ್ರಿಶ್ಚಿಯನ್ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಜಾರಿಗೊಳಿಸಲಾಗುತ್ತಿರುವ ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ಕಿರುಸಾಲ ಯೋಜನೆ ಮತ್ತು ಗೃಹಸಾಲದ ಮೇಲಿನ ಬಡ್ಡಿ ರಿಯಾಯಿತಿ ಸಹಾಯಧನ ಯೋಜನೆಗಳಡಿ ದೊರೆಯುವ ಸೌಲಭ್ಯ ಕಲ್ಪಿಸಿಕೊಡಲಾಗುವುದು. ಮತೀಯ ಅಲ್ಪಸಂಖ್ಯಾತ ವರ್ಗದವರಾದರು ಕ್ರಿಶ್ಚಿಯನ್ ಜನಾಂಗಕ್ಕೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರು. 22,000ದ ಒಳಗಿರಬೇಕು ಹಾಗೂ ವಯಸ್ಸು 18ರಿಂದ 55ವರ್ಷದೊಳಗಿರಬೇಕು.ಸಾಲ ಪಡೆಯಬಯಸುವ ಅಭ್ಯರ್ಥಿಗಳ ಆದಾಯ ಮಿತಿ ರು. 1 ಲಕ್ಷ ಮಿತಿಯೊಳಗಿರಬೇಕು. ಮಾಹಿತಿ . ನಮೂನೆಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 29ರೊಳಗೆ ಸಲ್ಲಿಸಲು ಕೋರಿದೆ. ತುರ್ತು ಮಾಹಿತಿಯನ್ನು 08182-228262 ದೂರವಾಣಿ ಮೂಲಕ ಪಡೆಯಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

