ಶಿವಮೊಗ್ಗ

ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published On :

ಸೊರಬ: ಪ್ರಸಕ್ತ ವರ್ಷದ ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ ವ್ಯಾಸಂಗಕ್ಕೆ ಪ್ರವೇಶಾತಿ ಆರಂಭವಾಗಿದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶಾಲ ಕಟ್ಟಡ, ನುರಿತ ಉಪನ್ಯಾಸಕರುಗಳು, ಗ್ರಂಥಾಲಯ, ಸುಸಜ್ಜಿತ ಪ್ರಯೋಗಾಲಯ, ಕ್ರೀಡೆ, ಸಾಂಸ್ಕೃತಿಕ, ಎನ್‌ಎಸ್‌ಎಸ್ ಅನುಕೂಲತೆಗಳು ಅತ್ಯಂತ ಕಡಿಮೆ ವೆಚ್ಚದಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹೊಂದಿರುವ ಕಾಲೇಜು ಈ ಹಿಂದಿನಿಂದಲೂ ಉತ್ತಮ ಫಲಿತಾಂಶ ನೀಡುತ್ತ ಬಂದಿದೆ. ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಸರ್ಕಾರದ ಆಶಯಕ್ಕೆ ಸ್ಪಂದಿಸಿ ಈ ಸದುಪಯೋಗವನ್ನು ಪಡೆಯಲು ವಿದ್ಯಾರ್ಥಿಗಳಲ್ಲಿ ಕೋರಿದ್ದಾರೆ.ಕಲಾವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಕನ್ನಡ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಅನ್ವಯಿಕ ಗಣಕ ವಿಜ್ಞಾನ, ಬಿಬಿಎಂ ಬಿಕಾಂ ವಿಭಾಗದಲ್ಲಿ ಕಡ್ಡಾಯ ವಿಭಾಗ ವಿಷಯಗಳು, ಬಿಎಸ್ಸಿ ವಿಭಾಗದಲ್ಲಿ ಭೌತಶಾಸ್ತ್ರ, ಗಣಿತಶಾಸ್ತ್ರ, ಗಣಕ ವಿಜ್ಞಾನ. ವಿವರಗಳಿಗೆ ದೂ-ಸಂ-08184 272259.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.