ಡೆಂಘೀ ಹರಡದಂತೆ ಜಾಗೃತಿ ಅಗತ್ಯ
ಕ.ಪ್ರ.ವಾರ್ತೆ,ಸೊರಬ, ಜೂ.4 ರಾಜ್ಯದಲ್ಲಿ ಡೆಂಘೀ ಹೆಚ್ಚಾಗುತ್ತಿದ್ದು, ಜ್ವರ ಪೀಡಿತರು ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದೆ ಹೋದಲ್ಲಿ ಮಾರಕ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ತಹಸೀಲ್ದಾರ್ ತೇಜಸ್ ಕುಮಾರ್ ಸಾರ್ವಜನಿಕರಿಗೆ ಎಚ್ಟರಿಕೆ ನೀಡಿದರು.
ಇಲ್ಲಿನ ಪಪಂ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಸಾಂಕ್ರಮಿಕ ರೋಗ: ಡೆಂಘೀ ಸಾಂಕ್ರಮಿಕ ರೋಗವಾಗಿರುವುದರಿಂದ ಸಾರ್ವಜನಿಕರು ಮುಂಜಾಗ್ರತಾ ವಹಿಸಬೇಕು ಎಂದ ಅವರು ಈ ಮಾರಕ ಜ್ವರದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘದವರು ತ್ವರಿತವಾಗಿ ನಡೆಸಬೇಕು ಎಂದರು.
ಆರೋಗ್ಯ ಇಲಾಖೆ ಅಧಿಕಾರಿ ರಮಾಕಾಂತ್ ಮಾತನಾಡಿ, ತಾಲೂಕಿನಲ್ಲಿ ಈಗಾಗಲೇ 3 ಜನರು ಡೆಂಘೀ ಜ್ವರದಿಂದ ಬಳಲುತ್ತಿದ್ದಾರೆ. ಗ್ರಾಮಗಳಲ್ಲಿ ಶುಚಿತ್ವ ಕಡಿಮೆ ಇದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಕಾಳಜಿ ವಹಿಸಿ ಜಾಗೃತಿ ಮೂಡಿಸಬೇಕು ಎಂದರು.
ಈಗಾಗಲೇ ಸಮರ್ಪಕ ಚಿಕಿತ್ಸೆ ನೀಡಲಾಗಿದೆ. ಜನ ಆತಂಕ ಪಡುವ ಅಗತ್ಯವಿಲ್ಲ. ಆದರೆ ಕಾಯಿಲೆ ಹರಡದಂತೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಿದರು. ಪಪಂ ಮುಖ್ಯಾಧಿಕಾರಿ ವೀರೇಶ್ ಕುಮಾರ್, ಶಿಕ್ಷಣ ಸಂಯೋಜಕ ವಿ.ಬಿ. ಜಾವೂರ್, ರಮೇಶ್, ಪಪಂ ಸದಸ್ಯ ಪ್ರಶಾಂತ ಮೇಸ್ತ್ರಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಶಂಕಿತ ಢೆಂಘೀಗೆ ಬಾಲಕ ಬಲಿ
ಶಿವಮೊಗ್ಗ: ಡೆಂಘೀ ಶಂಕಿತ ಬಾಲಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಚರಣ್ (5ವರ್ಷ) ಮೃತ ಬಾಲತ. ಈತ ಶಿಕಾರಿಪುರ ತಾಲೂಕಿನ ಹೊಸಗೊದ್ದಿನಕೊಪ್ಪದವನಾಗಿದ್ದು, ಸಾಮಾನ್ಯ ಜ್ವರ ಬಂದ ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಾತ್ಸಲ್ಯ ಆಸ್ಪತ್ರೆಗೆ ಕಳೆದ ಎರಡು ದಿನಗಳ ಹಿಂದೆ ದಾಖಲು ಮಾಡಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಚರಣ್ ಸೋಮವಾರ ರಾತ್ರಿ ಮೃತಪಟ್ಟಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

