ಶಿವಮೊಗ್ಗ

110 ಅಭ್ಯರ್ಥಿಗಳು ನೋಂದಣಿ

Published On :

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ ಮಾಹೆಯಲ್ಲಿ ಜಿಲ್ಲೆಯ 80 ಪುರುಷರು ಹಾಗೂ 31ಮಹಿಳೆಯರು  ಸೇರಿದಂತೆ ಒಟ್ಟು 110ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಎಸ್‌ಎಸ್‌ಎಲ್‌ಸಿ ಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿದ 10, ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರರಲ್ಲದವರು 44, ಪದವೀಧರರು -8 ಹಾಗೂ ತಾಂತ್ರಿಕ ಪದವೀಧರರು-49 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಿಯಾಯಿತಿ ದರದ ಬಸ್‌ಪಾಸ್
ಶಿವಮೊಗ್ಗ: ರಾಜ್ಯ ರಸ್ತೆ ಸಾರಿಗೆ ನಿಗಮ 2013-14ನೇ ಸಾಲಿಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ಪಾಸ್‌ಗಳನ್ನು ವಿತರಿಸಲು ಉದ್ಧೇಶಿಸಿದೆ. ಜೂನ್ 7ರಿಂದ ಮೊದಲ ಹಂತದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, (ರಜಾದಿನ ಒಳಗೊಂಡಂತೆ) ಬಸ್‌ಪಾಸ್‌ಗಳನ್ನು ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲು ಕ್ರಮ ಕೈಗೊಂಡಿದೆ. ಬಸ್‌ಪಾಸ್ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ನಿಗಧಿಪಡಿಸಿದ ಶುಲ್ಕದೊಂದಿಗೆ ಶೈಕ್ಷಣಿಕ ಸಂಸ್ಥೆಗಳ ಮೂಲಕ ನಿಗಮಕ್ಕೆ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಶೈಕ್ಷಣಿಕ ಸಂಸ್ಥೆಯಿಂದ ವಾಸಸ್ಥಳಕ್ಕೆ ಗರಿಷ್ಠ 60ಕಿಮೀ ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.