ಶಿವಮೊಗ್ಗ

ಕೆಡಿಪಿ ಸಭೆ

Published On :

ಶಿವಮೊಗ್ಗ: ಜೂನ್ 15ರಂದು ಬೆಳಿಗ್ಗೆ 11 ಗಂಟೆಗೆ ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅಧ್ಯಕ್ಷತೆಯಲ್ಲಿ 2012-13ನೇ ಸಾಲಿನ 4ನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಸಾಲ ಮನ್ನಾ
ಶಿವಮೊಗ್ಗ: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಆರಂಭದಿಂದ 2012 ಮೇ 13ರವರೆಗೆ ನಿಗಮದದಿಂದ ಸಾಲ ಸೌಲಭ್ಯ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಂಚಿನಹಣ, ಅವಧಿಸಾಲ ಮತ್ತು ವಿವಿಧ ಯೋಜನೆಯಡಿ ಪಡೆಯಲಾದ ಎಲ್ಲಾ ಸಾಲಗಳನ್ನು ಅಸಲು ಮತ್ತು ಬಡ್ಡಿ ಸಹಿತ ಕರ್ನಾಟಕ ಸರ್ಕಾರ ಸಾಲ ಮನ್ನಾ ಮಾಡಿದೆ. ಸಾಲ ಮನ್ನಾ ಮಾಡಿರುವ ಬಗ್ಗೆ ನಿಗಮದ ಎಲ್ಲಾ ಫಲಾನುಭವಿಗಳಿಗೆ ಪ್ರತ್ಯೇಕ ಪತ್ರ ಕಳಿಸಲಾಗುವುದೆಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಗೃಹರಕ್ಷಕ ದಳ ಶಿವಮೊಗ್ಗ ಜಿಲ್ಲಾ ಘಟಕ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕ ಸದಸ್ಯರ ಸ್ಥಾನಗಳಿಗೆ ನಿಷ್ಕಾಮ ಸೇವೆ ತತ್ವದಡಿಯಲ್ಲಿ ಸೇವೆ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿ 21ರಿಂದ 40ವರ್ಷ ವಯೋವುತಿಯೊಳಗಿನವರಾಗಿದ್ದು, ಕನಿಷ್ಠ 7ನೇ ತರಗತಿಯವರೆಗೆ ಓದಿದವರಾಗಿರಬೇಕು. ಶಿವಮೊಗ್ಗ ಮತ್ತು ಭದ್ರಾವತಿ ಘಟಕಕ್ಕೆ ಮಹಿಳಾ ಅಭ್ಯರ್ಥಿಗಳು ಹೆಸರು ನೋಂದಾಹಿಸಿಕೊಳ್ಳಬಹುದು.  
ಆಯ್ಕೆಯಾದ ಅಭ್ಯರ್ಥಿಗಳು ಪೊಲೀಸ್ ಇಲಾಖೆಯೊಂದಿಗೆ ಶಿಸ್ತು ಪಾಲನೆ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು. ಕರ್ತವ್ಯ ನಿರ್ವಹಿಸಿದ ದಿನವೊಂದಕ್ಕೆ 250 ರುಪಾಯಿ ಗೌರವಧನ ನೀಡಲಾಗುವುದು. ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಗೃಹರಕ್ಷಕದಳದ ಘಟಕಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 29ರೊಳಗಾಗಿ ಕಮಾಂಡೆಂಟ್, ಗೃಹರಕ್ಷಕದಳ, ಬಸವನಗುಡಿ, 4ನೇ ಮುಖ್ಯ ರಸ್ತೆ, ಶಿವಮೊಗ್ಗ ಇವರಿಗೆ ಕಳುಹಿಸಿಕೊಡಬೇಕು. ವಿವರಗಳಿಗಾಗಿ- 08182-222630.

ನಾಳೆ ಯಕ್ಷವೈಭವ-2013 ಪ್ರದರ್ಶನ
ಭದ್ರಾವತಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಭದ್ರಾವತಿಯ ಸುರಭಿ ಯಕ್ಷಕಲಾ ವೇದಿಕೆ ಆಶ್ರಯದಲ್ಲಿ ಪಟ್ಟಣದ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ 5.30ರಿಂದ ಯಕ್ಷವೈಭವ-2013 ಪ್ರದರ್ಶನಗೊಳ್ಳಲಿದೆ.
ಎರಡನೇ ಪ್ರದರ್ಶನಕ್ಕೆ ಮುನ್ನ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಯಕ್ಷಗಾನ ಕೇಂದ್ರದ ಪ್ರಾಂಶುಪಾಲ ಬನ್ನಂಜೆ ಸಂಜೀವ ಸುವರ್ಣ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಜೆ. ಅಪ್ಪಾಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಶಿವಮೊಗ್ಗದ ಡಾ. ಎಂ. ರತ್ನಾಕರ ಭಾಗವಹಿಸುವರು. ಸುರಭಿ ಯಕ್ಷಕಲಾ ವೇದಿಕೆಯ ಅಧ್ಯಕ್ಷೆ ವಂದನಾ ಆಚಾರ್ಯ ಅಧ್ಯಕ್ಷತೆ ವಹಿಸುವರು.
5.30ರಿಂದ 7 ರ ವರೆಗೆ ಮಾಯಾಪುರಿ ಎಂಬ ಯಕ್ಷಗಾನ ಪ್ರದರ್ಶನಗೊಳ್ಳುವುದು. 7ರಿಂದ 7.40ರ ವರೆಗೆ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ. 7.40 ರಿಂದ 9.30ರ ವರೆಗೆ ವೀರಮಣಿ ಕಾಳಗ ಎಂಬ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ. ನಾಗೇಶ ನಾಗರಕೂಡಿಗೆ ಭಾಗವತರಾಗಿಯೂ, ಮದ್ದಳೆಯ ಮೇಲೆ ಗಣೇಶ ಹೊನ್ನೆಕೂಡಿಗೆ ಹಾಗೂ ಚಂಡೆಯ ಮೇಲೆ ಕೃಷ್ಣಮೂರ್ತಿ ನಾಗರಕೂಡಿಗೆ ಸಾಥ್ ನೀಡಿದರೆ ಶ್ರೀನಿವಾಸ್ ಆರ್. ತಂತ್ರಿ ಶೃತಿ ನೀಡಲಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.