ಬಿತ್ತನೆ ಬೀಜಕ್ಕೆ ಶೇ.50 ಸಬ್ಸಿಡಿಗೆ ಆಗ್ರಹ
ಕ.ಪ್ರ. ವಾರ್ತೆ ಶಿವಮೊಗ್ಗ ಜೂ.6
ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಬಾರಿಯ ಬಿತ್ತನೆ ಬೀಜಕ್ಕೆ ಶೇ.50ರಷ್ಟು ಸಬ್ಸಿಡಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಮನವಿ ಅರ್ಪಿಸಿತು.
ಕಳೆದ ವರ್ಷ ಬಿತ್ತನೆ ಬೀಜಗಳಿಗೆ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದ್ದು, ಪ್ರಸಕ್ತ ವರ್ಷ ಶೇ.25 ರಷ್ಟು ಸಬ್ಸಿಡಿ ಮಾತ್ರ ನೀಡುತ್ತಿದೆ. ಹಿಂದಿನ ವರ್ಷಗಳಲ್ಲಿ ಬತ್ತ, ರಾಗಿ, ಜೋಳ, ಮೆಕ್ಕೆಜೋಳ ಇತರೆ ಬಿತ್ತನೆಗಳಿಗೆ ಕೇಂದ್ರ ಸರ್ಕಾರದಿಂದ ಶೇ.25ರಷ್ಟು ರಾಜ್ಯ ಸರ್ಕಾರದಿಂದ ಶೇ.25ರಷ್ಟು ಸೇರಿ ಒಟ್ಟು ಶೇ.50ರಷ್ಟು ಸಹಾಯಧನ ನೀಡುಲಾಗುತ್ತಿತ್ತು ಎಂದು ಸಂಘ ಮನವಿಯಲ್ಲಿ ತಿಳಿಸಿದೆ.
ಸಬ್ಸಿಡಿಗೆ ಮುಂದಾಗಲಿ: ಈ ವರ್ಷ ಶೇ.25ರಷ್ಟು ಮಾತ್ರ ಸಹಾಯಧನ ಕೊಡುತ್ತಿದ್ದು, ಬೀಜ ಖರೀದಿ ಕೇಂದ್ರಕ್ಕೆ ಇದು ಶೋಭೆ ತರುವ ವಿಚಾರವಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಯಾವ ಹಂತದಲ್ಲಿ ಲೋಪವಾಗಿದೆ ಎಂಬುದನ್ನು ಪತ್ತೆ ಹಚ್ಚಿ ಶೇ.50ರಷ್ಟು ಸಬ್ಸಿಡಿ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ರೈತರು ಬೀದಿಗೆ ಬಂದು ಚಳವಳಿ ಮಾಡುವ ಮೊದಲು ಕೊಡಲೇ ಶೇ.50ರಷ್ಟು ಸಬ್ಸಡಿ ರೈತರಿಗೆ ಒದಗಿಸಕೊಡಬೇಕೆಂದು ಒತ್ತಾಯಿಸಿದರು.
ಕಳೆದ ಬಾರಿ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಬತ್ತ ಖರೀದಿಸಿದ್ದು, ಹಣ ಪಾವತಿಸಿಲ್ಲಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರ ಕ್ವಿಂಟಾಲ್ ಬತ್ತಕ್ಕೆ 250 ಹೆಚ್ಚುವರಿ ಬೆಲೆ ನಿಗದಿಪಡಿಸಿ ಖರೀದಿಸಿತ್ತು. ಸುಮಾರು 4-5 ತಿಂಗಳಾದರು ಬತ್ತ ಖರೀದಿಸಿದ ರೈತರಿಗೆ ಇದುವರೆಗೂ ಹಣ ನೀಡಿಲ್ಲ ಎಂದು ಆರೋಪ ಮಾಡಿದರು. ಆದ್ದರಿಂದ ಈ ಕೂಡಲೇ ಸರ್ಕಾರ ಎಚ್ಚೆತ್ತು ಹಣ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡರು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಸಂಘದ ವೈ.ಜಿ. ಮಲ್ಲಿಕಾರ್ಜುನ, ರಾಘವೇಂದ್ರ, ಎಚ್. ಗುರುಶಾಂತಪ್ಪ, ಎಂ. ಮಂಜಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

