ವಿಎಸ್‌ಐಎಲ್‌ನಿಂದ ವಿಶ್ವ ಪರಿಸರ ದಿನಾಚರಣೆ
ಕ.ಪ್ರ.ವಾರ್ತೆ,ಭದ್ರಾವತಿ, ಜೂ.6
ಭಾರತೀಯ ಉಕ್ಕು ಪ್ರಾಧಿಕಾರದ ಒಂದು ಘಟಕವಾದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಸ್ಥಾವರದಿಂದ ಇಸ್ಪಾತ್ ಭವನದ ಮುಂಭಾಗದಲ್ಲಿ ವಿಶ್ವ ಪರಿಸರ ದಿನವನ್ನು ಬುಧವಾರ ಆಚರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಎಸ್.ಎಸ್. ವರ್ಮಾ ಪರಿಸರ ಸಂರಕ್ಷಣೆ ಮತ್ತು ಜೈವಿಕ ಸಮತೋಲನದ ಬಗ್ಗೆ ಹೆಚ್ಚು ಒತ್ತು ಕೊಡಬೇಕಾಗಿದೆ. ಅನುಪಯುಕ್ತವಾಗಿ ನೆಲಕ್ಕೆ ಎಸೆಯಲ್ಪಟ್ಟ ಆಹಾರ ಪದಾರ್ಥಗಳು ಒಂದು ರೀತಿಯ ವಿಷವನ್ನು ಉತ್ಪಾದಿಸುತ್ತವೆ. ಇದು ಧರೆಗೆ ಅಪಾಯಕಾರಿಯಾಗಿಯೂ ಹಾಗೂ ಹಾನಿಕಾರಕವಾಗಿಯೂ ಪರಿಣಮಿಸುತ್ತದೆ ಎಂದರು.
ಸಂಪನ್ಮೂಲ ರಕ್ಷಣೆ: ಅಪವ್ಯಯ ತಪ್ಪಿಸುವುದರಿಂದ ಕಚ್ಚಾವಸ್ತುಗಳ ಬಳಕೆ ಮತ್ತು ವ್ಯಯ ಕಡಮೆಯಾಗಿ ಸೊರಗುತ್ತಿರುವ ಸಂಪನ್ಮೂಲ ಸಂರಕ್ಷಣೆಯೂ ಆಗುತ್ತದೆಂದು ತಿಳಿಸಿದರು.
ಪರಿಸರ ನೀತಿಯನ್ನು ಮತ್ತು ಪರಿಸರ ಸಂರಕ್ಷಣಾ ಪ್ರತಿಜ್ಞಾ ವಿಧಿಯನ್ನು ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಬೋಧಿಸಲಾಯಿತು.
ಕಾರ್ಮಿಕರು, ಅಧಿಕಾರಿಗಳು, ವಿಐಎಸ್‌ಎಲ್ ಕಾರ್ಮಿಕರ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಮಹಿಳೆಯರು, ಶಾಲಾ ಮಕ್ಕಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪ ಮಹಾಪ್ರಬಂಧಕ ಬಿ.ಎಸ್. ವೆಂಕಟೇಶ್ ಸ್ವಾಗತಿಸಿದರು. ಉಪ ಪ್ರಬಂಧಕ ವೈ.ಕೆ. ಪಾಟೀಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

