ಯಕ್ಷವೈಭವ-2013 ಪ್ರದರ್ಶನ
ಭದ್ರಾವತಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಭದ್ರಾವತಿಯ ಸುರಭಿ ಯಕ್ಷಕಲಾ ವೇದಿಕೆ ಆಶ್ರಯದಲ್ಲಿ ಪಟ್ಟಣದ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ 5.30ರಿಂದ ಯಕ್ಷವೈಭವ-2013 ಪ್ರದರ್ಶನಗೊಳ್ಳಲಿದೆ. ಎರಡನೇ ಪ್ರದರ್ಶನಕ್ಕೆ ಮುನ್ನ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಯಕ್ಷಗಾನ ಕೇಂದ್ರದ ಪ್ರಾಂಶುಪಾಲ ಬನ್ನಂಜೆ ಸಂಜೀವ ಸುವರ್ಣ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಜೆ. ಅಪ್ಪಾಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಶಿವಮೊಗ್ಗದ ಡಾ. ಎಂ. ರತ್ನಾಕರ ಭಾಗವಹಿಸುವರು. ಸುರಭಿ ಯಕ್ಷಕಲಾ ವೇದಿಕೆಯ ಅಧ್ಯಕ್ಷೆ ವಂದನಾ ಆಚಾರ್ಯ ಅಧ್ಯಕ್ಷತೆ ವಹಿಸುವರು. 5.30ರಿಂದ 7 ರ ವರೆಗೆ ಮಾಯಾಪುರಿ ಎಂಬ ಯಕ್ಷಗಾನ ಪ್ರದರ್ಶನಗೊಳ್ಳುವುದು. 7ರಿಂದ 7.40ರ ವರೆಗೆ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ. 7.40 ರಿಂದ 9.30ರ ವರೆಗೆ ವೀರಮಣಿ ಕಾಳಗ ಎಂಬ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

