ಸುದ್ದಿ ಸಂಕ್ಷೇಪ
59 ಅಭ್ಯರ್ಥಿಗಳ ಖರ್ಚುವೆಚ್ಚ ಮಾಹಿತಿ ಲಭ್ಯ
ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2013ರಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 87 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಫಲಿತಾಂಶ ಪ್ರಕಟವಾದ 30 ದಿನದೊಳಗೆ ಚುನಾವಣಾ ಖರ್ಚುವೆಚ್ಚವನ್ನು ಸಲ್ಲಿಸಬೇಕಿತ್ತು. ಆದರೆ 59 ಅಭ್ಯರ್ಥಿಗಳು ಮಾತ್ರ ಖರ್ಚುವೆಚ್ಚ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಕಚೇರಿಗೆ ಬಂದು ಚುನಾವಣಾ ಖರ್ಚುವೆಚ್ಚಗಳನ್ನು ಪರಿಶೀಲಿಸಬಹುದು. ಈ ಕುರಿತ ಮಾಹಿತಿ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದ್ದಾರೆ.
ಜೆಎನ್‌ಸಿಸಿಇ ಉತ್ತಮ ಕಾಲೇಜು
ಶಿವಮೊಗ್ಗ: ಭಾರತದ 50 ಶ್ರೇಷ್ಠ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ನಗರದ ಜೆಎನ್‌ಸಿಸಿಇ ಕಾಲೇಜು ಸೇರಿದೆ. ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಗುಣಮಟ್ಟ, ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಮತ್ತು ಸಾಧನೆ, ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ಮೂಲ ಸೌಕರ್ಯಗಳು, ವಿದ್ಯಾರ್ಥಿಗಳ ಬೆಳವಣಿಗೆಗಾಗಿ ಒದಗಿಸುತ್ತಿರುವ ಸೌಲಭ್ಯ, ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ ಆಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ, ಹೀಗೆ ಇನ್ನು ಹಲವಾರು ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸಮೀಕ್ಷೆ ನಡೆಸಿ, ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ.
ಕಾಲೇಜು ವಿರುದ್ಧ ಕ್ರಮಕ್ಕೆ ಆಗ್ರಹ
ಶಿವಮೊಗ್ಗ: ಪ್ರಥಮ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಒತ್ತಾಯವಾಗಿ ಕಾಲೇಜಿನಿಂದ ವರ್ಗಾವಣೆ ಮಾಡಲು ಮುಂದಾಗಿರುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ. 2013-14ನೇ ಸಾಲಿನಲ್ಲಿ ಪ್ರಥಮ ಪಿಯುಸಿ ಮಾರ್ಚ್ ತಿಂಗಳಲ್ಲಿ ಮುಗಿದಿದ್ದು, ಪರೀಕ್ಷೆ ಬರೆದ ಕೆಲವು ಕಾಲೇಜಿನಲ್ಲಿ ಪಾಸಾಗಿರುತ್ತಾರೆ. ಆದರೆ, ಕೆಲವು ಕಾಲೇಜುಗಳಾದ ವಿದ್ಯಾನಿಕೇತನ, ಫೇಸ್, ವಿಕಾಸ, ವಿದ್ಯಾಭಾರತಿ ಮುಂತಾದ ಸಂಸ್ಥೆಗಳು ಮೇ ತಿಂಗಳಲ್ಲಿ ಪ್ರಥಮ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳದೇ ಒತ್ತಾಯವಾಗಿ ವರ್ಗಾವಣೆ ಪಡೆಯಲು ಒತ್ತಾಯಿಸುತ್ತಿವೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶ್ರೀಜಿತ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

