ಶಿವಮೊಗ್ಗ

ದುಬಾರಿ ಚಿಕಿತ್ಸೆ: ಬಡವರಿಗೆ ಹೊರೆ

Published On :

ಕಪ್ರ ವಾರ್ತೆ  ಶಿವಮೊಗ್ಗ  ಜೂ. 7
ಮಣಿಪಾಲ್ ಆರೋಗ್ಯಕಾರ್ಡ್ ನೋಂದಣಿ ಹಾಗೂ ಮಾಹಿತಿ ಕೇಂದ್ರ ನಗರದ ಮಥುರಾ ಪ್ಯಾರಡೈಸ್ ಆವರಣದಲ್ಲಿ ಪ್ರಾರಂಭಗೊಂಡಿದೆ.
ಮಾಹಿತಿ ಕೇಂದ್ರದ ಪ್ರಚಾರ ಫಲಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ನಾಗರೀಕರ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಕಾರ್ಯದರ್ಶಿ ಕೆ.ವಿ. ವಸಂತಕುಮಾರ್, ಮನುಷ್ಯನ ಒತ್ತಡಗಳ ನಡುವೆ ಆರೋಗ್ಯದ ಸಮಸ್ಯೆ ಉಂಟಾಗುವುದು ಇಂದು ಸಾಮಾನ್ಯವಾಗಿದೆ. ಆದರೆ, ಚಿಕಿತ್ಸೆ ದುಬಾರಿಯಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಇದು ಹೊರೆಯಾಗಲಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಯ ಮಣಿಪಾಲ್ ಆರೋಗ್ಯಕಾರ್ಡ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕು ಎಂದರು.
ಒಪಿಡಿ ತೆರೆಯಿರಿ: ಮಣಿಪಾಲ್ ಆಸ್ಪತ್ರೆಯವರು, ಶಿವಮೊಗ್ಗದಲ್ಲಿ ಓಪಿಡಿ ಕೇಂದ್ರವನ್ನು ತೆರೆದರೆ ಈ ಭಾಗದ ಬಹಳಷ್ಟು ಜನರಿಗೆ ಅನುಕೂಲವಾಗಲಿದೆ ಎಂದರು
ಆರೋಗ್ಯ ಕಷ್ಟ ಕಷ್ಟ: ಮಥುರಾ ಫುಡ್ ಪ್ರಾಡಕ್ಟ್‌ನ ಮಾಲೀಕರಾದ ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಮನುಷ್ಯ ಇಂದು ಜಂಜಾಟದಲ್ಲಿ ಬದುಕಿದ್ದಾನೆ. ಅನ್ನ, ಅಕ್ಷರ, ಆರೋಗ್ಯ ಕಾಪಾಡಿಕೊಳ್ಳುವುದೇ ಆತನಿಗೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಮಥುರಾ ಫುಡ್ ಪ್ರಾಡಕ್ಟ್ ಸಂಸ್ಥೆ ಆಹಾರ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಇದೀಗ ಆರೋಗ್ಯ ಕ್ಷೇತ್ರಕ್ಕೂ ತನ್ನ ಕೊಡುಗೆ ನೀಡಲು ಮುಂದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಣಿಪಾಲ ಕಸ್ತೂರಬಾ ಆಸ್ಪತ್ರೆಯ ಜನರಲ್ ಮ್ಯಾನೇಜರ್ ಅನಿಲ್ ಪೌಲ್, ಮಣಿಪಾಲ್ ಆರೋಗ್ಯ ಕಾರ್ಡ್ ಮುಖ್ಯ ವಿತರಕ ಅ.ನಾ. ವಿಜಯೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.