ಶಿವಮೊಗ್ಗ

ಆಸ್ಪತ್ರೆಗೆ ದಾಖಲಾದ ಮಕ್ಕಳಿಗೆ ಡೆಂಘೀ ಇಲ್ಲ

Published On :

ಕ.ಪ್ರ.ವಾರ್ತೆ  ಶಿಕಾರಿಪುರ   ಜೂ.8
ತಾಲೂಕಿನ ಗೊದ್ದನಕೊಪ್ಪ ಮತ್ತಿತರ ಗ್ರಾಮಗಳ ಕೆಲ ಮಕ್ಕಳು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ವೈರಲ್ ಫಿವರ್‌ನಿಂದ ಎಂದು ಸರ್ಕಾರದ ಅಧಿಕೃತ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದ್ದು ಸಾರ್ವಜನಿಕರು ಡೆಂಘೀ ಜ್ವರದ ಬಗ್ಗೆ ಭಯಭೀತರಾಗದಂತೆ ತಾಲೂಕು ವೈದ್ಯಾಧಿಕಾರಿ ಡಾ. ನಾಗರಾಜನಾಯ್ಕ ತಿಳಿಸಿದ್ದಾರೆ.
ಶನಿವಾರ ಪಟ್ಟಣದ ಜಿಲ್ಲಾ ಆಸ್ಪತ್ರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ತಾಲೂಕಿನ ಗೊದ್ದನಕೊಪ್ಪ ಮತ್ತಿತರ ಗ್ರಾಮದ 8 ಕ್ಕೂ ಅಧಿಕ ಮಕ್ಕಳು ತೀವ್ರ ರೀತಿಯ ಜ್ವರದ ಭಾಧೆಯಿಂದ ತತ್ತರಿಸಿ ಆಸ್ಪತ್ರೆಗೆ ದಾಖಲಾಗಿದ್ದು ಇದರಿಂದಾಗಿ ತಾಲೂಕಿನಲ್ಲಿ ಡೆಂಘೀ ಜ್ವರದ ಬಗ್ಗೆ ಸಾರ್ವಜನಿಕರು ಭಯಬೀತರಾಗಿದ್ದರು. ಇಲಾಖೆ ರೋಗಪೀಡಿತ ಮಕ್ಕಳ ರಕ್ತದ ಮಾದರಿಯನ್ನು ಶಿವಮೊಗ್ಗದ ವಿಡಿಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿಯಂತೆ ಮಕ್ಕಳು ಕೇವಲ ವೈರಲ್ ಫಿವರ್‌ನಿಂದ ಬಳಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಹಳ್ಳಿಗಳಲ್ಲಿ ಸ್ವಚ್ಛತೆಗೆ ಗ್ರಾಮಸ್ಥರು ನಿರ್ಲಕ್ಷ್ಯ ವಹಿಸಿದ್ದಾರೆ. ಸಾಂಕ್ರಾಮಿಕ ಮತ್ತಿತರ ಮಾರಕ ರೋಗದ ನಿಯಂತ್ರಣಕ್ಕೆ ಇಲಾಖೆಯ ಜತೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಕೇವಲ ಇಲಾಖೆಯಿಂದ ಮಾತ್ರ ರೋಗದ ಸಂಪೂರ್ಣ ಹತೋಟಿ ಅಸಾಧ್ಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.