ಚಿನ್ನಾಭರಣ ಅಪಹರಣ
ಶಿವಮೊಗ್ಗ: ಪ್ರವಾಸಕ್ಕೆಂದು ಬಂದ ದಂಪತಿಗಳ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರುಪಾಯಿ ಚಿನ್ನಾಭರಣ ಅಪಹರಿಸಿ ಪರಾರಿಯಾಗಿರುವ ಘಟನೆ ನಗರದ ಪುರದಾಳು ಗ್ರಾಮದಲ್ಲಿ ನಡೆದಿದೆ. ಅನೂಪ್ ಮತ್ತು ಶ್ರೀವಾಣಿ ದರೋಡೆಗೊಳಗಾದ ದಂಪತಿ. ಇಲ್ಲಿನ ಪುರದಾಳು ಡ್ಯಾಂ ನೋಡಲು ಇವರಿಬ್ಬರು ಬೈಕ್ನಲ್ಲಿ ಆಗಮಿಸಿದ್ದರು. ಆ ವೇಳೆ ಹೆಚ್ಚು ಮಳೆ ಬಂದ ಕಾರಣ ಅಲ್ಲಿಯೇ ಇದ್ದಂತಹ ಮರದ ಕೆಳಗೆ ಆಶ್ರಯ ಪಡೆದಿದ್ದರು. ಹಲ್ಲೆ ನಡೆಸಿ, ಶ್ರೀವಾಣಿ ಅವರ ಉಂಗುರ, ಮಾಂಗಲ್ಯಸರ ಅಪಹರಿಸಿ ಪರಾರಿಯಾಗಿದ್ದಾರೆ. ಇದರ ಮೌಲ್ಯ ಸುಮಾರು 1.50 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ತುಂಗಾನಗರ ಠಾಣೆಯಲ್ಲಿ ದಾಖಲಾಗಿದೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಬಬ್ಬೂರುಕಮ್ಮೆ ಸೇವಾ ಸಮಿತಿ ಜಿಲ್ಲಾ ವಿಭಾಗ ಜಿಲ್ಲೆಯಲ್ಲಿರುವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಿದ್ದು, ಅರ್ಜಿ ಆಹ್ವಾನಿಸಿದೆ. 2012-13ನೇ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ. 90 ಮತ್ತು ಪಿಯುಸಿಯಲ್ಲಿ ಶೇ.85 ಕ್ಕೂ ಅಧಿಕ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು ಕಾರಕೊಡ್ಲು, ಕೃಷ್ಣ ರುಕ್ಮಣಿ, 2ನೇ ಕ್ರಾಸ್ ಅಪ್ಪಾಜಿ ರಾವ್ ಕಾಂಪೌಂಡ್, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿಗೆ ದಾಖಲೆಗಳನ್ನು ಸಲ್ಲಿಸಬಹುದು. ಜೂನ್ 23ರಂದು ಕೋಟೆ ರಸ್ತೆಯ ಶ್ರೀ ಗಾಯಿತ್ರಿ ದೇವಸ್ಥಾನದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಮಿತಿಯ ಕಾರ್ಯದರ್ಶಿ ಎಸ್. ನಾಗೇಶ್ ತಿಳಿಸಿದ್ದಾರೆ. ವಿವರಗಳಿಗಾಗಿ- ಮೊ.ಸಂ.9242463580.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

