ಡಿಸಿಯಿಂದ ವಕೀಲ ವೃತ್ತಿಗೆ ಅವಮಾನ: ವಕೀಲರ ಪ್ರತಿಭಟನೆ
ಶಿವಮೊಗ್ಗ: ವಕೀಲ ಸಮೂಹವನ್ನು ಅವಹೇಳನ ಮಾಡುವ ರೀತಿಯಲ್ಲಿ ಜಿಲ್ಲಾಧಿಕಾರಿಯವರು ನಿಂದಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ನ್ಯಾಯಾಲಯದ ವಕೀಲರ ತಂಡ ಹೋರಾಟಕ್ಕಿಳಿದಿದೆ. ಆದರೆ, ಕೆಲವು ವಕೀಲರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಸ್ಪಷ್ಟಪಡಿಸಿದ್ದಾರೆ. ಆಗಿದ್ದಿಷ್ಟು, ಸೋಮವಾರ ಮಧ್ಯಾಹ್ನ 3.45ರ ಸುಮಾರಿಗೆ ತೆರೆದ ನ್ಯಾಯಾಲಯದಲ್ಲಿ (ಡಿಸಿ ಕೋರ್ಟ್) ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ತಡೆಯಾಜ್ಞೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಏರಿದ ದನಿಯಲ್ಲಿ ವಕೀಲರು ಪ್ರಶ್ನಿಸಿದ್ದಾರೆ. ಜೊತೆಗೆ ಡಿಸಿ ಕೋರ್ಟ್ನ ಅಧಿಕಾರ ವ್ಯಾಪ್ತಿಯನ್ನೇ ಪ್ರಶ್ನಿಸಿದ್ದಾರೆನ್ನಲಾಗಿದೆ. ಈ ಸಂದರ್ಭದಲ್ಲಿ ಡಿಸಿಯವರು ಉಸುರಿದ ಕೆಲವು ಪದಗಳು ಘಟನೆಗೆ ಕಿಚ್ಚುಹಚ್ಚಲು ಕಾರಣವಾಗಿದೆ.
ಪ್ರತಿಭಟನೆ: ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಗೊಳಿಸಿರುವ ಜಿಲ್ಲಾಧಿಕಾರಿಯವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ವಕೀಲರ ಸಂಘದ ಸದಸ್ಯರು ರಾಜ್ಯಪಾಲರು, ಸಭಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ಮನವಿ ಅರ್ಪಿಸಿದ್ದಾರೆ. ಅದೇ ರೀತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದೌಡಾಯಿಸಿದ ವಕೀಲರು ಘೋಷಣೆ ಕೂಗಿ ಜಿಲ್ಲಾಧಿಕಾರಿ ವಿರುದ್ಧ ಅಸಮಾಧಾನ ಹೊರಹಾಕಿದರು. ವಕೀಲರಾದ ದೇವೇಂದ್ರಪ್ಪ, ಈಸೂರು ಲೋಕೇಶ್, ಎನ್. ನಾಗೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

