ಶಿವಮೊಗ್ಗ

ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.11
ಕಾಟಿಕೆರೆ, ಹೊಸೂರು ಗ್ರಾಮಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಮಂಗಳವಾರ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ತಾಲೂಕಿನ ಶೆಟ್ಟಿಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸಮನೆ ತಾಂಡ, ಹಾರೋಬೆನವಳ್ಳಿ ತಾಂಡ, ಬಿ. ಬೀರನಹಳ್ಳಿ, ವೆಂಕಟಾಪುರ, ಮಲ್ಲಾಪುರ, ಶೆಟ್ಟಿಹಳ್ಳಿ, ಮತ್ತಿಘಟ್ಟ, ಗುಡ್ರುಗೊಪ್ಪ, ಮಾಳೇನಹಳ್ಳಿ ಗ್ರಾಮಗಳು ಸೇರಿದಂತೆ 10- 12 ಹಳ್ಳಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ, ಅಧಿಕಾರಿಗಳು ಬಸ್ ಸೇವೆ ಕಲ್ಪಿಸಲು ಉದಾಸೀನ ತೋರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸೂಕ್ತ ಬಸ್ ಸೌಲಭ್ಯ ಇಲ್ಲದಿರುವ ಕಾರಣ ಶಾಲಾ- ಕಾಲೇಜು ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ಶಿವಮೊಗ್ಗ ಬಂದು ಹೋಗಲು ತ್ರಾಸವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಇಲ್ಲಿನ ಶಾಲಾ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆ ತಲುಪಲು ಕಷ್ಟಪಡುತ್ತಿದ್ದಾರೆ ಎಂದರು. ಇನ್ನು ಎರಡು ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ರಸ್ತೆ ತಡೆ ನಡೆಸುವುದಾಗಿ ನವಕರ್ನಾಟಕ ವೇದಿಕೆ ಎಚ್ಚರಿಸಿದೆ. ಪ್ರತಿಭಟನೆಯಲ್ಲಿ ಗೋ ರಮೇಶ ಗೌಡ, ಗೀತಾ, ನರಸಿಂಹ, ಮಂಜುನಾಥ, ಜಯಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.