ಶಿವಮೊಗ್ಗ

ವಿದ್ಯುತ್ ಕಂಬಗಳ ಸ್ಥಳಾಂತರ: ಪ್ರತಿಭಟನೆ

Published On :

ಆಯನೂರು: ವಿದ್ಯುತ್ ಕಾಮಗಾರಿಗಾಗಿ ಸರಬರಾಜು ಮಾಡಲಾಗಿದ್ದ ಕಂಬಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೇರೆಡೆಗೆ ಸಾಗಿಸುವುದನ್ನು ವಿರೋದಿಸಿ ಜಯಕರ್ನಾಟಕ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಯನೂರಿನ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟನೆ ನಡೆಸಿದರು.
ಆಯನೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ವಿತರಣೆ ಮಾಡಲು ಮೆಸ್ಕಾಂ ವಿದ್ಯುತ್ ಕಂಬಗಳನ್ನು ಹಾಕಲಾಗಿತ್ತು. ಅಲ್ಲದೇ ಈ ಗ್ರಾಮ ವ್ಯಾಪ್ತಿಯಲ್ಲಿ ತುಮಕೂರು- ಹೊನ್ನಾವರ ಸೆಕ್ಷನ್ ಆಯನೂರು ಠಾಣೆ ವ್ಯಾಪ್ತಿಯಲ್ಲಿ, ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಹಾದೂ ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮಗೆ ಇಲಾಖೆಯಿಂದ ನಿಗದಿ ಮಾಡಿದ ಶುಲ್ಕ ಭರಿಸಿದರೆ ಮಾತ್ರ ವಿದ್ಯುತ್ ಕಂಬಗಳನ್ನು ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಹೇಳುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಸಂಬಂಧ ಮೆಸ್ಕಾಂ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಮ್ಮಲ್ಲಿರುವ ಸಮಸ್ಯೆಯನ್ನು ಬಗೆಹರಿಸಿಕೊಂಡು ಸಾರ್ವಜನಿಕರಿಗೆ ವಿದ್ಯುತ್ ವಿತರಣೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೆಸ್ಕಾಂನ ಎಂಜಿನಿಯರ್ ಅಬ್ದುಲ್ ಮುನಾಫ್ ಮಾತನಾಡಿ, ನಾವು ಹೊಸ ಮಾರ್ಗದ ಸಲುವಾಗಿ ಕಂಬಗಳನ್ನು ಹಾಕುವಾಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಂಬ ಹಾಕಲು ಹಣದ ಬೇಡಿಕೆ ಸಲ್ಲಿಸಿದ್ದರಿಂದ ಕೆಲಸ ಸ್ಥಗಿತಗೊಳಿಸಲಾಗಿದೆ. ಸಮಸ್ಯೆ ಬಗೆಹರಿಸಿಕೊಂಡು ಜನತೆಗೆ ತೂಂದರೆಯಾಗದಂತೆ ವಿದ್ಯುತ್ ವಿತರಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಉದಯ ಶೆಟ್ಟಿ, ಚಂದ್ರು ಶೆಟ್ಟಿ, ಉಪಾಧ್ಯಕ್ಷ ಚಂದ್ರಪ್ಪ, ಪ್ರಸನ್ನ, ಉದಯಕುಮಾರ್, ಶ್ರೀಕಾಂತ್, ಸತೀಶ, ಮಂಜುನಾಥ, ಸಂಘಟನೆ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.