ಶಿವಮೊಗ್ಗ

ಅರಣ್ಯ ಸಂರಕ್ಷಣೆಗೆ ಜನರ ಸಹಭಾಗಿತ್ವ ಅಗತ್ಯ

Published On :

ಕ.ಪ್ರ.ವಾರ್ತೆ, ಸಾಗರ, ಜೂ. 12
 ಅರಣ್ಯ ಸಂರಕ್ಷಣೆಯಲ್ಲಿ ಇಲಾಖೆಯ ಜೊತೆಗೆ ಜನರ ಸಹಭಾಗಿತ್ವವೂ ಮುಖ್ಯ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು.
ಇಲ್ಲಿನ ಅರಣ್ಯ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕೃಷಿ ಅರಣ್ಯ ಪ್ರೋತ್ಸಾಹ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಅರಣ್ಯ ಸಂರಕ್ಷಣೆಯ ಯೋಜನೆಗಳು ಜನರ ಸಹಕಾರದಿಂದ ಮಾತ್ರ ಯಶಸ್ವಿ ಅನುಷ್ಠಾನ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರೋತ್ಸಾಹಧನ:  ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳ ಪೂರೈಕೆ ಹಾಗೂ ಸಸಿಗಳನ್ನು ನೆಟ್ಟು ರಕ್ಷಿಸಿ ಬದುಕುಳಿದ ಸಸಿಗಳಿಗೆ ನಗದು ಪ್ರೋತ್ಸಾಹಧನ ನೀಡಲಾಗುವುದು. ಗ್ರಾಮ ಅರಣ್ಯ ಸಮಿತಿ, ರೈತಪರ ಕಾರ್ಯನಿರ್ವಹಿಸುತ್ತಿರುವ ಸಂಘಸಂಸ್ಥೆಗಳಿಗೆ ಅಗತ್ಯ ಮಾಹಿತಿ, ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇಂತಹ ಯೋಜನೆಗಳಿಗೆ ಕೃಷಿ, ತೋಟಗಾರಿಕೆ ಹಾಗೂ ಜಲಾನಯನ ಇಲಾಖೆ ಸಹಭಾಗಿತ್ವ ಇರುತ್ತದೆ. ಹಸರೀಕರಣಕ್ಕೆ ಉತ್ತೇಜನ ನೀಡಲು ಇಲಾಖೆ ವತಿಯಿಂದ ಇಂತಹ ಕಾರ್ಯಕ್ರಮ ನಿರಂತರ ನಡೆಸಲಾಗುತ್ತಿದೆ ಎಂದು ಹೇಳಿದರು.
ಭೀಮನಕೋಣೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಚ್.ರಾಘವೇಂದ್ರ, ಜನರ ಒತ್ತಡ, ನ್ಯಾಯಾಲಯದ ಆದೇಶ ಪಾಲನೆ ಇನ್ನಿತರ ಸಮಸ್ಯೆಗಳಿಂದಾಗಿ ಅರಣ್ಯ ಇಲಾಖೆ ಜನಸ್ನೇಹಿ    ಯಾಗುವುದು ಕಷ್ಟಸಾಧ್ಯ. ಆದರೂ ಇಲಾಖೆ ಇಂತಹ ಯೋಜನೆಗಳ ಅನುಷ್‌ಠಾನದ ಮೂಲಕ ಜನರ ಸಮೀಪ ಇಲಾಖೆ ಹೋಗುತ್ತಿರುವುದು ಗಮನಾರ್ಹ ಎಂದು ಹೇಳಿದರು.
ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಚೈತನ್ಯ ಗ್ರಾಮೀಣ ಅಭಿವೃದ್ಧಿಯ ವಿನಾಯಕ ರಾವ್ ಬೇಳೂರು, ಕೃಷ್ಣಮೂತರ್, ಸೊರಬದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್, ರಾಮಚಂದ್ರ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.