ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ
ಶಿವಮೊಗ್ಗ: ತುಂಗಾ ಡ್ಯಾಂನ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿರುವುದರಿಂದ, ತುಂಗಾ ಡ್ಯಾಂನಿಂದ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಯಾವುದೇ ಸಂದರ್ಭದಲ್ಲಿ ಬಿಡಬಹುದಾಗಿರುತ್ತದೆ. ಆದ ಕಾರಣ ತುಂಗಾ ನದಿಯ ಪಾತ್ರದಲ್ಲಿರುವ ಪ್ರದೇಶದ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಇದರ ಬಗ್ಗೆ ಎಚ್ಚರಿಕೆಯಿಂದಿರಲು ಹಾಗೂ ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ ಹಾಗೂ ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಗೊಳ್ಳುವಂತೆ ತುಂಗಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸಭಾಧ್ಯಕ್ಷರ ಪ್ರವಾಸ
ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಜೂನ್ 13ರಂದು ಸಂಜೆ 4 ಗಂಟೆಗೆ ಸಾಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. 15ರಂದು ಸಾಗರ ಪಟ್ಟಣದಲ್ಲಿ ಕೆ.ಡಿ.ಪಿ. ಸಭೆಯಲ್ಲಿ ಪಾಲ್ಗೊಂಡು, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. 15ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ಕೆ.ಡಿ.ಪಿ. ಸಭೆಯಲ್ಲಿ ಪಾಲ್ಗೊಳ್ಳುವರು. 16ರಂದು ಬೆಳಿಗ್ಗೆ 10.30ಕ್ಕೆ ತುಮರಿ, 12.30ಕ್ಕೆ ಕುದರೂರು, ಸಂಜೆ 3 ಗಂಟೆಗೆ ಎಸ್.ಎಸ್.ಬೋಗ್ನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸುವರು. ಜೂನ್ 17ರಂದು ಬೆಳಿಗ್ಗೆ 10 ಗಂಟೆಗೆ ಭೀಮನಕೋಣೆ, ಮಧ್ಯಾಹ್ನ 12.30ಕ್ಕೆ ಹೆಗ್ಗೋಡು, 3 ಗಂಟೆಗೆ ಉಳ್ಳೂರು, 4.30ಕ್ಕೆ ಯಡಜಿಗಳೆಮನೆ, 18ರಂದು ಬೆಳಿಗ್ಗೆ 10.30ಕ್ಕೆ ನಾಗವಳ್ಳಿ, ಮಧ್ಯಾಹ್ನ 12 ಗಂಟೆಗೆ ಚನ್ನಗೊಂಡ, 3 ಗಂಟೆಗೆ ಬಾನುಕುಳಿ ಹಾಗೂ ಸಂಜೆ 4.30ಕ್ಕೆ ಅರಲಗೋಡು ಭೇಟಿ ನೀಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

