ಶಿವಮೊಗ್ಗ

ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

Published On :

ಸಾಗರ: ತಾಲೂಕಿನ ತುಮರಿ, ಬ್ಯಾಕೋಡು ಸೇರಿದಂತೆ ಹಿನ್ನೀರಿನ ಪ್ರದೇಶದ ನಾಲ್ಕು ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಐದು ದಿನಗಳಿಂದ ವಿದ್ಯುತ್, ದೂರವಾಣಿ ಸಂಪರ್ಕವಿಲ್ಲದೆ ಪರಿತಪಿಸುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಳೆ ಕಾರಣದಿಂದ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿದ ಪರಿಣಾಮ ಹತ್ತಾರು ಕಂಬಗಳು ನೆಲಕ್ಕುರುಳಿವೆ. ಹಿನ್ನೀರಿನ ಗ್ರಾಮಗಳಿಗೆ ಕಾರ್ಗಲ್ ಹಾಗೂ ಹೊಸನಗರ ಭಾಗದಿಂದ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಎರಡೂ ಕಡೆಗಳಿಂದಲೂ ತೊಂದರೆ ಉಂಟಾಗಿದೆ.
ವಿದ್ಯುತ್ ಸಂಪರ್ಕವಿಲ್ಲದೆ ದೈನಂದಿನ ಎಲ್ಲ ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಉಂಟಾಗಿದೆ. ವಿದ್ಯುತ್ ಸಂಪರ್ಕವಿಲ್ಲದ ಕಾರಣದಿಂದ ದೂರವಾಣಿ ಸಂಪರ್ಕವೂ ಇಲ್ಲದಂತಾಗಿದೆ. ದೂರವಾಣಿ ವಿನಿಮಯ ಕೇಂದ್ರದಲ್ಲಿ ಜನರೇಟರ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣದಿಂದ ಗ್ರಾಮವಾಸಿಗಳು ಎಲ್ಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಕಳೆದ ವರ್ಷದ ಮಳೆಗಾಲದಲ್ಲಿ ಎಣ್ಣೆಹೊಳೆ ಸೇತುವೆ ಕುಸಿದಿರುವುದರಿಂದ ರಾತ್ರಿ ಸಮಯದಲ್ಲಿ ಯಾರಾದರೂ ಅನಾರೋಗ್ಯಪೀಡಿತರಾದರೆ ರಸ್ತೆ ಮಾರ್ಗವಾಗಿಯೂ ತಾಲೂಕು ಕೇಂದ್ರವನ್ನು ತಲುಪಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯಲ್ಲಿ ಅರಣ್ಯ ಇಲಾಖೆಯವರು ಜಂಗಲ್ ಕಾಟಿಂಗ್ ಸರಿಯಾಗಿ ನಿರ್ವಹಿಸದ ಕಾರಣದಿಂದ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ತಕ್ಷಣ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.