ಪರಿಶಿಷ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ಸಾರಿಗೆ ಇಲಾಖೆಯು ಪ್ರಸಕ್ತ ಸಾಲಿನ ಎಸ್ಪಿಸಿ ಯೋಜನೆಯಡಿಯಲ್ಲಿ ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯಾಪ್ತಿಗೊಳಪಡುವ ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ಮೋಟಾರು ವಾಹನ ಚಾಲನ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಟೋರಿಕ್ಷಾ -4, ಲಘು ಮೋಟಾರು ವಾಹನ-14, ಭಾರಿ ಸಾರಿಗೆ ವಾಹನ-7 ಸೇರಿದಂತೆ ಒಟ್ಟು 25 ಅಭ್ಯರ್ಥಿಗಳಿಗೆ ವಾಹನ ಚಾಲನಾ ತರಬೇತಿ ನೀಡಲಾಗುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ವೆಚ್ಚದ ಶೇ.75ರಷ್ಟು ವೆಚ್ಚವನ್ನು ಇಲಾಖಾ ಭರಿಸುವುದು. ಉಳಿದ ಶೇ.25ರಷ್ಟನ್ನು ಅಭ್ಯರ್ಥಿಗಳು ಭರಿಸಬೇಕಾಗುವುದು. ಅರ್ಜಿಯನ್ನು ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಿಂದ ಪಡೆದು ಜೂನ್ 22ರೊಳಗಾಗಿ ಸಲ್ಲಿಸುವಂತೆ ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಮಕ್ಕಳಿಗೆ ಆರೋಗ್ಯ ಶಿಬಿರ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಓದುತ್ತಿರುವ 6ರಿಂದ 14 ವಯೋವಾನದ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಜೂನ್ 21ರಿಂದ 28ರ ವರೆಗೆ ಪ್ರತಿದಿನ ಬೆಳಿಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಜೂನ್ 21ರಂದು ಹೊಸನಗರದ ಸ.ಮಾ.ಹೆ. ಶಾಲೆಯಲ್ಲಿ, ಜೂನ್ 22ರಂದು ತೀರ್ಥಹಳ್ಳಿಯ ಬಿ.ಆರ್.ಸಿ. ಕೇಂದ್ರದಲ್ಲಿ, ಜೂನ್ 24ರಂದು ಸಾಗರದ ವಿನೋಬನಗರದ ಸ.ಹಿ.ಪ್ರಾ. ಶಾಲೆಯಲ್ಲಿ, ಜೂನ್ 25ರಂದು ಸೊರಬದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಸ.ಹಿ.ಪ್ರಾ. ಶಾಲೆಯಲ್ಲಿ, ಜೂನ್ 26ರಂದು ಶಿಕಾರಿಪುರ ಗುರುಭವನದ ಹತ್ತಿರವಿರುವ ಸ.ಉ.ಹಿ.ಪ್ರಾ. ಶಾಲೆಯಲ್ಲಿ, ಜೂನ್ 27ರಂದು ಭದ್ರಾವತಿಯ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಬಿ.ಆರ್.ಸಿ. ಕೇಂದ್ರದಲ್ಲಿ ಹಾಗೂ ಜೂನ್ 28ರಂದು ಶಿವಮೊಗ್ಗದ ಕರ್ನಾಟಕ ಸಂಘದ ಹತ್ತಿರವಿರುವ ಮೈನ್ ಮಿಡ್ಲಿಸ್ಕೂಲ್ನಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ನಡೆಯಲಿವೆ. ವಿಶೇಷ ಅಗತ್ಯವುಳ್ಳ ಮಕ್ಕಳ ಪೋಷಕರು ತಮ್ಮ ಮಕ್ಕಳೊಂದಿಗೆ ನಿಗದಿತ ದಿನದಂದು ಸೂಚಿಸಿದ ಸ್ಥಳದಲ್ಲಿ ಸಕಾಲಕ್ಕೆ ಹಾಜರಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸರ್ವಶಿಕ್ಷಣ ಅಭಿಯಾನ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪನಿರ್ದೇಶಕರು ತಿಳಿಸಿದ್ದಾರೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಅವರು ಜೂನ್ ಮಾಹೆಯ ನಿಗದಿತ ದಿನಾಂಕಗಳಂದು ಜಿಲ್ಲೆಯ ಎಲ್ಲ ತಾಲೂಕುಗಳ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಪೊಲೀಸ್ ಉಪಾಧೀಕ್ಷಕರು ಜೂ.18ರಂದು ಬೆ. 10.30ರಿಂದ 1.30ರವರೆಗೆ ಹೊಸನಗರ, ಜೂ.19ರಂದು ಬೆಳಿಗ್ಗೆ 10.30ರಿಂದ 1.30ರ ವರೆಗೆ ತೀರ್ಥಹಳ್ಳಿ. ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಕೆ.ಸಿ. ಪುರುಷೋತ್ತಮರವರು ಜೂ.17ರಂದು ಬೆ.10.30ರಿಂದ 1.30ರವರೆಗೆ ಸಾಗರ, ಮ.3ರಿಂದ ಸ. 5.30ರವರೆಗೆ ಸೊರಬ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸಮೀವುಲ್ಲ ಜೂ.18ರಂದು ಬೆ.10.30ರಿಂದ 1.30ರ ವರೆಗೆ ಭದ್ರಾವತಿ, ಮ.3 ರಿಂದ ಸಂಜೆ 5.30ರವರೆಗೆ ಶಿಕಾರಿಪುರ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು ಅಹವಾಲುಗಳನ್ನು ಸ್ವೀಕರಿಸುವರು ಎಂದು ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

