ಬಸವನಹೊಳೆ ಡ್ಯಾಂ ಹೂಳು ತೆಗೆಯುವ ಕಾರ್ಯ ಬಹುತೇಕ ಪೂರ್ಣ: ಡಾ.ಶೆಟ್ಟಿ
ಕ.ಪ್ರ. ವಾರ್ತೆ, ಸಾಗರ, ಜೂ.13
ನಗರಕ್ಕೆ ಕುಡಿಯುವ ನೀರು ಪೂರೈಸುವ ಬಸವನಹೊಳೆ ಡ್ಯಾಂನ ಹೂಳು ತೆಗೆಯುವ ಬಹುತೇಕ ಪೂರ್ಣಗೊಂಡಿದ್ದು, ಇದಕ್ಕಾಗಿ ಸುಮಾರು 60 ಲಕ್ಷ ವಿನಿಯೋಗಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ತಿಳಿಸಿದರು.
ಕಾಮಗಾರಿ ಕುರಿತಂತೆ ಗುರುವಾರ ಮಾಧ್ಯಮದವರಿಗೆ ಮಾಹಿತಿ ನೀಡಿ, ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಡ್ಯಾಮಿನ ಆಳ ಹೆಚ್ಚಿಸುವ ಕಾಮಗಾರಿಗೆ ಅಗತ್ಯವಾದ ಹಣವನ್ನು ಬರಪರಿಹಾರ ಕಾಮಗಾರಿಯಲ್ಲಿ ತಕ್ಷಣ ಬಿಡುಗಡೆ ಮಾಡುವ ಭರವಸೆ ನಿಡಿದ್ದಾರೆ ಎಂದರು.
ನೀರಿನ ಸಂಗ್ರಹ ಹೆಚ್ಚಳ: ಸುಮಾರು ಒಂದು ಕೋಟಿ ರು. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಈಗ ಮಳೆ ಪ್ರಾರಂಭವಾಗಿದ್ದರಿಂದ ಕಾಮಗಾರಿಯನ್ನು ಪೂರ್ಣ ಮುಗಿಸಲು ಸಾಧ್ಯವಾಗಿಲ್ಲ. ಆದರೆ ಈಗ ನಡೆದ ಕಾಮಗಾರಿಯಿಂದ ಕಳೆದ ವರ್ಷಕ್ಕಿಂತ ಈ ಬಾರಿ ನೀರಿನ ಸಂಗ್ರಹ ಹೆಚ್ಚಲಿದೆ ಎಂದು ತಿಳಿಸಿದರು.
ಸೊರಬ, ಸಾಗರ, ಶಿಕಾರಿಪುರ ಹಾಗೂ ಹೊಸನಗರ ತಾಲೂಕುಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು ರೈತರು ಆತಂಕಪಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಶಿಕಾರಿಪುರ, ಸೊರಬ ಹಾಗೂ ಸಾಗರದ ಕೆಲವು ಭಾಗಗಳಲ್ಲಿ ನಿಗದಿತ ಪ್ರಮಾಣದ ಮಳೆಯಾಗದೆ ಹೋದರೆ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಜೊತೆಗೆ 264 ತೆರೆದ ಬಾವಿ ಹಾಗೂ ಪೈಪ್ಲೈನ್ ಅಳವಡಿಕೆಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಅದಕ್ಕೆ ಅಗತ್ಯವಾದ ಹಣವನ್ನು ತಕ್ಷಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ಇತಿಹಾಸ ಪ್ರಸಿದ್ಧ ಮಹಾಗಣಪತಿ ದೇವಸ್ಥಾನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯೋಜನೆ ತಯಾರಿಸಲಾಗಿದ್ದು, ಶಿಲ್ಪಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನೀಲನಕ್ಷೆ ಹಾಗೂ ಖರ್ಚು ವೆಚ್ಚ ಕುರಿತು ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ದೇವಸ್ಥಾನದ ಮುಖಮಂಟಪವನ್ನು ಪುನರ್ ನಿರ್ಮಿಸುವ ಕುರಿತು ಸಹ ನಿಗಾ ವಹಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

